ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾ ಕೋರಾಪುಟ್ ರಸ್ತೆ ಅಪಘಾತದ ಸಂತ್ರಸ್ತರಿಗ ಪರಿಹಾರ ಮಂಜೂರು ಮಾಡಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 FEB 2021 5:26PM by PIB Bengaluru

ಒಡಿಶಾದ ಕೋರಾಪುಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬದ ಅವಲಂಬಿತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ  ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ.

ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ಬಿಡುಗಡೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50,000 ರೂಪಾಯಿ ಮಂಜೂರು ಮಾಡಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಕಚೇರಿ, “ಒಡಿಶಾದ ಕೋರಾಪುಟ್ ನ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ಅವಲಂಬಿತರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡಿರುವವರಿಗೆ 50,000 ರೂ ನೀಡಲಾಗುವುದು.” ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1694417) ವಿಸಿಟರ್ ಕೌಂಟರ್ : 145