ಪ್ರಧಾನ ಮಂತ್ರಿಯವರ ಕಛೇರಿ
ಇಸ್ರೇಲ್ ಪ್ರಧಾನಿ ಗೌರವಾನ್ವಿತ ಬೆಂಜಮಿನ್ ನೇತನ್ಯಾಹು ಹಾಗು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಾಲೋಚನೆ
Posted On:
01 FEB 2021 6:46PM by PIB Bengaluru
ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಜನವರಿ 29 ರಂದು ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುವುದಾಗಿ ಹೇಳಿದರು. ಇಸ್ರೇಲಿ ರಾಜತಾಂತ್ರಿಕರು ಮತ್ತು ಆವರಣದ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಎಲ್ಲಾ ರೀತಿಯ ಸಂಪನ್ಮೂಲ ಬಳಸಿ ದಾಳಿ ಘಟನೆಯ ಸಂಚುಕೋರರನ್ನು ಪತ್ತೆ ಮಾಡಿ ಶಿಕ್ಷಿಸಲಾಗುವುದು ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಭಾರತ ಮತ್ತು ಇಸ್ರೇಲ್ ಭದ್ರತಾ ಸಂಸ್ಥೆಗಳು ನಿಕಟ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ.
ತಮ್ಮ ದೇಶಗಳಲ್ಲಿ ಕೋವಿಡ್-19 ಸೋಂಕು ವಿರುದ್ಧ ನಡೆಸುತ್ತಿರುವ ಹೋರಾಟದ ಪ್ರಗತಿಯ ಬಗ್ಗೆ ಈ ನಾಯಕರು ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ. ಈ ವಲಯದಲ್ಲಿ ಮತ್ತಷ್ಟು ಸಹಯೋಗದ ಸಾಧ್ಯತೆಗಳ ಬಗ್ಗೆ ಇದೇ ಸಂದರ್ಭದಲ್ಲಿ ಚರ್ಚಿಸಿದರು.
***
(Release ID: 1694450)
Visitor Counter : 213
Read this release in:
Malayalam
,
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu