ಪ್ರಧಾನ ಮಂತ್ರಿಯವರ ಕಛೇರಿ

ಫೆಬ್ರವರಿ 19, ವಿಶ್ವಭಾರತ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

Posted On: 17 FEB 2021 8:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 19ರಂದು ಬೆಳಗ್ಗೆ 11 ಗಂಟೆಗೆ ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್  ಶ್ರೀ ಜಗ್ದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಕೇಂದ್ರ ಶಿಕ್ಷಣ  ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 2535 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಗುವುದು.

ವಿಶ್ವ ಭಾರತಿ ಕುರಿತು

1921ರಲ್ಲಿ ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರು ವಿಶ್ವಭಾರತಿಯನ್ನು ಸ್ಥಾಪನೆ ಮಾಡಿದರು. ಇದು ದೇಶದ ಅತ್ಯಂತ ಹಳೆಯ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. 1951 ಮೇ ತಿಂಗಳಲ್ಲಿ ವಿಶ್ವ ಭಾರತಿಯನ್ನು ಕೇಂದ್ರೀಯ ವಿಶ್ವವಿದ್ಯಾಲಯ ಎಂದು ಘೋಷಿಸಲಾಯಿತು ಮತ್ತು ಸಂಸತ್ತಿನ ಕಾಯಿದೆಯ ಮೂಲಕ ರಾಷ್ಟ್ರೀಯ ಜ್ಯೇಷ್ಠತಾ ಸಂಸ್ಥೆಯ ಸ್ಥಾನಮಾನ ನೀಡಲಾಯಿತು. ಗುರುದೇವ ಠಾಗೋರ್ ಅವರು ರೂಪಿಸಿದ ಶಿಕ್ಷಣಶಾಸ್ತ್ರವನ್ನು ಪಾಲನೆ ಮಾಡುತ್ತಿದ್ದ ವಿಶ್ವವಿದ್ಯಾಲಯ ಕ್ರಮೇಣ ಆಧುನಿಕ ವಿಶ್ವವಿದ್ಯಾಲಯ ರೂಪಿಸಿದ ಶಿಕ್ಷಣ ಪದ್ದತಿಯನ್ನು ಅಳವಡಿಸಿಕೊಂಡಿದೆ. ಪ್ರಧಾನಮಂತ್ರಿಗಳು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಸಹ ಆಗಿದ್ದಾರೆ.

***


(Release ID: 1699338) Visitor Counter : 181