ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉನ್ನತ ಮಟ್ಟದ ಕೇಂದ್ರ ತಂಡಗಳನ್ನು ರವಾನಿಸಿದ ಕೇಂದ್ರ ಸರ್ಕಾರ


ಕೋವಿಡ್-19 ಸೋಂಕು ಇತ್ತೀಚೆಗೆ ಹೆಚ್ಚಾಗುತ್ತಿರುವ 7 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಆರೋಗ್ಯ ಕಾರ್ಯದರ್ಶಿ ಪತ್ರ ಹಾಗು ನಿಯಂತ್ರಣಕ್ಕೆ ನಿರ್ದಿಷ್ಟ ಕ್ರಮ ಕೈಗೊಳ್ಳಲು ಸಲಹೆ

Posted On: 24 FEB 2021 11:58AM by PIB Bengaluru

ಕೋವಿಡ್-19 ಸಾಂಕ್ರಾಮಿಕ ಪರಿಣಾಮಕಾರಿ ನಿಯಂತ್ರಣ, ನಿರ್ವಹಣೆ ಮತ್ತು ನಿರ್ದಿಷ್ಟ ಕೋವಿಡ್ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಕೈಗೊಳ್ಳುವುದನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಕರ್ನಾಟಕ,ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ತಮಿಳುನಾಡು, ಪಶ್ಚಿಮಬಂಗಾಳ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ಉನ್ನತ ಮಟ್ಟದ ಬಹುಶಿಸ್ತೀಯ ತಂಡಗಳನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ. ಮೂವರು ಸದಸ್ಯರ ಬಹುಶಿಸ್ತೀಯ ತಂಡಗಳ ನೇತೃತ್ವವನ್ನು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿ ವಹಿಸಿದ್ದಾರೆ. ತಂಡಗಳು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿವೆ ಮತ್ತು ಕೋವಿಡ್-19 ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿರುವುದಕ್ಕೆ ನಿಖರ ಕಾರಣಗಳನ್ನು ಗುರುತಿಸಲಿದೆ. ಅಲ್ಲದೆ ಇವು ಸೋಂಕು ಪ್ರಸರಣಕ್ಕೆ ತಡೆ ಹಾಕಲು ಅಗತ್ಯ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕೈಗೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪರಿಸ್ಥಿತಿಯನ್ನು ಆಧರಿಸಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ನಿರಂತರವಾಗಿ ಗಂಭೀರ ಪರಾಮರ್ಶೆ ನಡೆಸುವಂತೆ ಸೂಚಿಸಲಾಗಿದೆ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಈವರೆಗೆ ಪಡೆದಿರುವ ಲಾಭವನ್ನು ನಷ್ಟವಾಗದಂತೆ ಖಾತ್ರಿಪಡಿಸಬೇಕೆಂದು ಸೂಚಿಸಲಾಗಿದೆ.

ಅಲ್ಲದೆ ಕೇಂದ್ರ ಸರ್ಕಾರ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಿಗೆ ಪತ್ರಗಳನ್ನು ಬರೆದು, ಆರ್ ಟಿಪಿಸಿಆರ್ ಟೆಸ್ಟ್ ಗಳ ಪ್ರಮಾಣ ಇಳಿಕೆಯಾಗಿರುವ ಬಗ್ಗೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಳದ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸೋಂಕು ಪ್ರಸರಣ ತಡೆಗೆ ತೀವ್ರ ತೆರನಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಹಾಗೂ ಜನಸಂಖ್ಯೆಯಲ್ಲಿ ಈವರೆಗೆ ಪತ್ತೆ ಮಾಡಲಾಗದ ಪ್ರಕರಣಗಳ ಪತ್ತೆಗೆ ಆರ್ ಟಿಪಿಸಿಆರ್ ಪರೀಕ್ಷೆ ಖಾತ್ರಿಪಡಿಸುವಂತೆ ಸೂಚಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲೆಲ್ಲಿ ಸೋಂಕು ಕಾಣಿಸಿಕೊಂಡಿದೆಯೋ ಅಂತಹ ಕಡೆ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಮತ್ತು ಆರ್ ಪಿಸಿಆರ್ ಹಾಗೂ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಗಳನ್ನು ನಡೆಸುವಂತೆ ಮತ್ತು  ಸೋಂಕಿನ ಗುಣಲಕ್ಷಣಗಳಿಲ್ಲದ ಎಲ್ಲ ನೆಗೆಟಿವ್ ಗಳನ್ನು ಕಡ್ಡಾಯವಾಗಿ ಆರ್ ಟಿಪಿಸಿಆರ್ ಮೂಲಕ ಪರೀಕ್ಷೆ ಮಾಡುವುದನ್ನು ಖಾತ್ರಿಪಡಿಸುವಂತೆ ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಗಳನ್ನು ಕಡ್ಡಾಯವಾಗಿ ಐಸೋಲೇಟ್ ಮಾಡಬೇಕು/ಆಸ್ಪತ್ರೆಗಳಲ್ಲಿಡಬೇಕು, ಅವರ ಸಮೀಪದ ಸಂಪರ್ಕಗಳನ್ನು ಪತ್ತೆಹಚ್ಚಿ ಯಾವುದೇ ವಿಳಂಬ ಮಾಡದೆ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ ಕೇಂದ್ರ ಸರ್ಕಾರ ಸೋಂಕು ಪ್ರಸರಣ ತಡೆಗೆ ವಿಶೇಷವಾಗಿ ಕೆಲವು ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಹೊಸ ಬಗೆಯ ರೂಪಾಂತರ ಸೋಂಕಿನ ಬಗ್ಗೆ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು, ಅದರಲ್ಲಿ ಯಾವುದೇ ಲೋಪವಾದರೆ ಸೋಂಕಿನ ಪರಿಸ್ಥಿತಿ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಉನ್ನತ ಮಟ್ಟದ ತಂಡಗಳಿಗೆ ಸಮಯ ನೀಡಬೇಕು ಮತ್ತು ತಮ್ಮ ರಾಜ್ಯಗಳ ಭೇಟಿ ವೇಳೆ ಪರಿಸ್ಥಿತಿಯ ಬಗ್ಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ತಂಡಗಳು ವಿವರಣೆ ನೀಡಲಿವೆ ಎಂದು ತಿಳಿಸಿದ್ದಾರೆ

ಕ್ರಮಗಳು ದೇಶಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಭಾರತದ ಶ್ರೇಣೀಕೃತ ಮತ್ತು ಸಕ್ರಿಯ ಕ್ರಮಗಳ ಭಾಗವಾಗಿದೆ. ಆರೋಗ್ಯ ಸಚಿವಾಲಯ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ, ಅಧಿಕ ಪ್ರಕರಣಗಳಿರುವ ಅಥವಾ ಅಧಿಕ ಸಾವು ಸಂಭವಿಸುತ್ತಿರುವ ಕೆಲವು ಜಿಲ್ಲೆಗಳ ಪರಿಸ್ಥಿತಿ ಕುರಿತಂತೆ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದೆ. ತಂಡಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ತಳಮಟ್ಟದ ಮಾಹಿತಿಯನ್ನು ಸಂಗ್ರಹಿಸಲಿವೆ ಹಾಗೂ ಸವಾಲುಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲಿದ್ದಾರೆ

***



(Release ID: 1700426) Visitor Counter : 217