ಸಂಪುಟ

ನವೀಕರಿಸಬಹುದಾದ ಇಂಧನ ಸಹಕಾರ ಕುರಿತ ಭಾರತ ಮತ್ತು ಫ್ರಾನ್ಸ್ ನಡುವಿನ ಒಪ್ಪಂದಕ್ಕೆ ಸಂಪುಟ ಅನುಮೋದನೆ

Posted On: 03 MAR 2021 12:59PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ನವೀಕರಿಸಬಹುದಾದ ಇಂಧನ ಸಹಕಾರ ಕ್ಷೇತ್ರದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ ಸಹಿ ಹಾಕಿದ್ದ ತಿಳಿವಳಿಕೆ ಒಪ್ಪಂದಕ್ಕೆ ಅಂಗೀಕಾರ ನೀಡಿದೆ. 2021 ರ ಜನವರಿಯಲ್ಲಿ ಒಪ್ಪಂದಕ್ಕೆ ಸಹಿ ಮಾಡಲಾಗಿತ್ತು.

ಪರಸ್ಪರ ಲಾಭ, ಸಮಾನತೆ ಮತ್ತು ಪರಸ್ಪರ ಸ್ಪಂದನೆಯ ಆಧಾರದ ಮೇಲೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರದ ಉತ್ತೇಜನ ನೀಡುವುದು ಒಪ್ಪಂದದ ಉದ್ದೇಶವಾಗಿದೆ.

ಇದರ ಜತೆಗೆ, ಒಪ್ಪಂದವು,

  • ಸೌರ, ಗಾಳಿ, ಜಲ ಮತ್ತು ಜೈವಿಕ ಇಂಧನಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳನ್ನು ಒಳಗೊಂಡಿದೆ.
  • ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿ ವಿನಿಮಯ ಮತ್ತು ತರಬೇತಿ;
  • ವೈಜ್ಞಾನಿಕ ಮತ್ತು ವೈಜ್ಞಾನಿಕ ಮಾಹಿತಿ ಮತ್ತು ದತ್ತಾಂಶಗಳ ವಿನಿಮಯ;
  • ಕಾರ್ಯಾಗಾರಗಳು ಮತ್ತು ಸೆಮಿನಾರ್‌ಗಳ ಸಂಘಟನೆ; ತಂತ್ರಜ್ಞಾನ ಮತ್ತು ಉಪಕರಣಗಳ ವರ್ಗಾವಣೆ;
  • ಜಂಟಿ ಸಂಶೋಧನೆ ಮತ್ತು ತಾಂತ್ರಿಕ ಯೋಜನೆಗಳ ಅಭಿವೃದ್ಧಿಗೆ ಸಂಬಂಧಿಸಿದೆ.

ಈ ಒಪ್ಪಂದವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಮತ್ತು ಆ ಮೂಲಕ 2030 ರ ವೇಳೆಗೆ 450 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವ ಪ್ರಕ್ರಿಯೆಗೆ ನೆರವಾಗುತ್ತದೆ.

***(Release ID: 1702172) Visitor Counter : 6