ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ

ಕ್ರೀಡೆ ಮತ್ತು ಯುವ ವ್ಯವಹಾರಗಳ ಸಹಕಾರಕ್ಕಾಗಿ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

प्रविष्टि तिथि: 16 MAR 2021 4:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಭಾರತ ಗಣರಾಜ್ಯದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಮಾಲ್ಡೀವ್ಸ್ ಗಣರಾಜ್ಯದ ಯುವಜನ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯದ ನಡುವೆ ಕ್ರೀಡೆ ಮತ್ತು ಯುವ ವ್ಯವಹಾರಗಳ ಸಹಕಾರಕ್ಕಾಗಿ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದ(ಎಂ.ಓ.ಯು.)ದ ಬಗ್ಗೆ ವಿವರಣೆ ನೀಡಲಾಯಿತು. ಈ ತಿಳಿವಳಿಕೆ ಒಪ್ಪಂದಕ್ಕೆ 2020ರ ನವೆಂಬರ್ ನಲ್ಲಿ ಅಂಕಿತ ಹಾಕಲಾಗಿತ್ತು.

ಉದ್ದೇಶಗಳು

ಭಾರತ ಮತ್ತು ಮಾಲ್ಡೀವ್ಸ್ ನಡುವೆ ಕ್ರೀಡೆ ಮತ್ತು ಯುವ ವ್ಯವಹಾರಗಳ ಕ್ಷೇತ್ರದಲ್ಲಿನ ದ್ವಿಪಕ್ಷೀಯ ವಿನಿಮಯ ಕಾರ್ಯಕ್ರಮವು, ಕ್ರೀಡಾ ವಿಜ್ಞಾನ, ಕ್ರೀಡಾ ವೈದ್ಯಕೀಯ, ತರಬೇತಿ ತಂತ್ರಗಾರಿಕೆಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ನಮ್ಮ ಕ್ರೀಡಾಪಟುಗಳ ಕಾರ್ಯಕ್ಷಮತೆ ಹಾಗೂ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಕಾರಣವಾಗುವ ಯುವ ಉತ್ಸವಗಳು ಮತ್ತು ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಜ್ಞಾನ ಮತ್ತು ಪರಿಣತಿಯ ವಿಸ್ತರಣೆಗೆ ಅವಕಾಶ ನೀಡುತ್ತದೆ. 

ಪ್ರಯೋಜನಗಳು

ಮಾಲ್ಡೀವ್ಸ್ ನೊಂದಿಗೆ ಕ್ರೀಡೆ ಮತ್ತು ಯುವಜನ ವ್ಯವಹಾರಗಳ  ದ್ವಿಪಕ್ಷೀಯ ಸಹಕಾರದಿಂದ ಹೊರಹೊಮ್ಮುವ ಪ್ರಯೋಜನಗಳು, ಜಾತಿ, ಮತ, ಧರ್ಮ, ಲಿಂಗತ ತಾರತಮ್ಯವಿಲ್ಲದೆ ಎಲ್ಲ ಕ್ರೀಡಾಪಟುಗಳಿಗೆ ಸಮಾನವಾಗಿ ಅನ್ವಯಿಸುತ್ತವೆ.

***


(रिलीज़ आईडी: 1705152) आगंतुक पटल : 142
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Punjabi , Gujarati , Odia , Telugu