ಪ್ರಧಾನ ಮಂತ್ರಿಯವರ ಕಛೇರಿ
ಚಿನಾಬ್ ನದಿಗೆ ಅಡ್ಡಲಾಗಿ ಕಮಾನು ಆಕಾರದಲ್ಲಿ ವಿಶ್ವದ ಅತಿ ಎತ್ತರದ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
प्रविष्टि तिथि:
05 APR 2021 7:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೆ, ಚಿನಾಬ್ ನದಿಗೆ ಅಡ್ಡಲಾಗಿ ವಿಶ್ವದ ಅತಿ ಎತ್ತರದ ಕಮಾನು ಆಕಾರದ ಸೇತುವೆ ನಿರ್ಮಾಣ ಪೂರ್ಣಗೊಳಿಸಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ‘ನಮ್ಮ ಭಾರತೀಯರ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ಜಗತ್ತಿಗೆ ಒಂದು ಅತ್ಯುತ್ತಮ ಉದಾಹರಣೆಯನ್ನು ನೀಡಿದೆ. ಈ ವೇಗದ ನಿರ್ಮಾಣ ಕೇವಲ ಆಧುನಿಕ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ಭಾರತ ಎಷ್ಟು ವೇಗದ ಪ್ರಗತಿ ಸಾಧಿಸುತ್ತಿದೆ ಎಂಬುದಕ್ಕೆ ಮಾತ್ರ ಸಾಕ್ಷಿಯಲ್ಲ, ‘ಸಂಕಲ್ಪದಿಂದ ಸಿದ್ಧಿ’ ಮಂತ್ರದೊಂದಿಗೆ ಬದಲಾಗುತ್ತಿರುವ ದುಡಿಯುವ ಸಂಸ್ಕೃತಿಗೆ ಒಂದು ಉದಾಹರಣೆಯಾಗಿದೆ’ ಎಂದು ಹೇಳಿದ್ದಾರೆ.
****
(रिलीज़ आईडी: 1709858)
आगंतुक पटल : 268
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam