ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 30 APR 2021 11:32AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸೋಲಿ ಸೊರಾಬ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಶ್ರೀ ಮೋದಿ ಅವರುಶ್ರೀ ಸೋಲಿ ಸೊರಾಬ್ಜಿ ಅವರು ಅತ್ಯುತ್ತಮ ವಕೀಲ ಮತ್ತು ಬುದ್ಧಿಜೀವಿಯಾಗಿದ್ದರು. ಕಾನೂನಿನ ಮೂಲಕ ಅವರು ಬಡವರು ಮತ್ತು ವಂಚಿತರಿಗೆ ನೆರವಾಗಲು ಮುಂದಾಗುತ್ತಿದ್ದರು. ಅವರು ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದು ಸದಾ ಸ್ಮರಣೆಯಲ್ಲಿರುತ್ತದೆ ಎಂಬುದು ಉಲ್ಲೇಖನಾರ್ಹ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ.ಎಂದು ತಿಳಿಸಿದ್ದಾರೆ.

***


(रिलीज़ आईडी: 1715021) आगंतुक पटल : 184
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam