ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ನಡುವೆ ದೂರವಾಣಿ ಸಂಭಾಷಣೆ

Posted On: 07 MAY 2021 2:56PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಎಂಪಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. 
ಕೋವಿಡ್-19 ಎರಡನೇ ಅಲೆಯ ವಿರುದ್ಧ ಭಾರತದ ಹೋರಾಟಕ್ಕೆ ಆಸ್ಟ್ರೇಲಿಯಾ ಸರಕಾರ ಮತ್ತು ಜನರು ನೀಡಿದ ತ್ವರಿತ ಮತ್ತು ಉದಾರ ಬೆಂಬಲದ ಬಗ್ಗೆ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಾಗತಿಕವಾಗಿ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸಲು ಕೈಗೆಟುಕುವ ದರದಲ್ಲಿ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಲಸಿಕೆಗಳು ಹಾಗೂ ಔಷಧಗಳ ಲಭ್ಯತೆಯನ್ನು ಖಚಿತಪಡಿಸುವ ಅಗತ್ಯವನ್ನು ಉಭಯ ನಾಯಕರು ಅಂಗೀಕರಿಸಿದರು. 
ಈ ಹಿನ್ನಲೆಯಲ್ಲಿ, ʻಟ್ರಿಪ್ಸ್ʼ ಅಡಿಯಲ್ಲಿ ತಾತ್ಕಾಲಿಕ ವಿನಾಯಿತಿಗಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ʻಡಬ್ಲ್ಯುಟಿಒʼದಲ್ಲಿ ಕೈಗೊಂಡ ಉಪಕ್ರಮಕ್ಕೆ ಆಸ್ಟ್ರೇಲಿಯಾದ ಬೆಂಬಲವನ್ನು ಪ್ರಧಾನಿ ಕೋರಿದರು. 
2020ರ ಜೂನ್ 4ರಂದು ನಡೆದ ವರ್ಚುವಲ್ ಶೃಂಗಸಭೆಯ ನಂತರ ಭಾರತ-ಆಸ್ಟ್ರೇಲಿಯಾ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಉಭಯ ನಾಯಕರು ಪರಸ್ಪರ ಗಮನ ಸೆಳೆದರು. ಜೊತೆಗೆ, ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮತ್ತು ಜನರ ನಡುವಿನ ಸಂಬಂಧಗಳನ್ನು ಪೋಷಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. 
ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ ನಾಯಕರು, ನಿಯಮಾಧಾರಿತ ಅಂತರರಾಷ್ಟ್ರೀಯ ವ್ಯವಸ್ಥೆ; ಮುಕ್ತ, ತೆರದ ಮತ್ತು ಸಮಗ್ರ ಇಂಡೋ-ಪೆಸಿಫಿಕ್ ಪ್ರದೇಶಕ್ಕಾಗಿ ಒಟ್ಟಾಗಿ ಕೆಲಸ ಮಾಡುವ ಮಹತ್ವವನ್ನು ಪುನರುಚ್ಚರಿಸಿದರು.

 

****
 



(Release ID: 1716906) Visitor Counter : 179