ಪ್ರಧಾನ ಮಂತ್ರಿಯವರ ಕಛೇರಿ

ತಂತ್ರಜ್ಞಾನ ದಿನದಂದು ವಿಜ್ಞಾನಿಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 MAY 2021 11:49AM by PIB Bengaluru

ರಾಷ್ಟ್ರೀಯ ತಂತ್ರಜ್ಞಾನ ದಿನದಂದು ವಿಜ್ಞಾನಿಗಳು ಮತ್ತು ವಿಜ್ಞಾನದ ಬಗ್ಗೆ ಆಸಕ್ತರಾಗಿರುವ ಸಮುದಾಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಪ್ರಧಾನಮಂತ್ರಿ ಅವರು, “ರಾಷ್ಟ್ರೀಯ ತಂತ್ರಜ್ಞಾನ ದಿನದಂದು ನಮ್ಮ ವಿಜ್ಞಾನಿಗಳು ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರ ಸ್ಥಿರತೆ ಮತ್ತು ಕಠಿಣ ಪರಿಶ್ರಮಕ್ಕೆ ನಮನ. ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ 1988 ರ ಪೋಖ್ರಾನ್ ಪರೀಕ್ಷೆಯನ್ನು ನಾವು ಹೆಮ್ಮೆಯಿಂದ ಸ್ಮರಿಸಿಕೊಳ್ಳುತ್ತೇವೆ.

ಯಾವುದೇ ಸವಾಲಿನ ಪರಿಸ್ಥಿತಿಯಲ್ಲಿ ನಮ್ಮ ವಿಜ್ಞಾನಿಗಳು ಮತ್ತು ಸಂಶೋದನಾ ಮನೋಭಾವದವರು ಅಂತಹ ಸಂದರ್ಭದಲ್ಲಿ ಎತ್ತರದ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದಾರೆ ಮತ್ತು ಸವಾಲುಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೆಲಸಮಾಡಿದ್ದಾರೆ. ಕಳೆದ ವರ್ಷ ಕೋವಿಡ್ -19 ವಿರುದ್ಧ ಹೋರಾಡಲು ಶ್ರಮಿಸಿದ್ದಾರೆ. ಅವರ ಸ್ಫೂರ್ತಿ ಮತ್ತು ಗಮನಾರ್ಹ ಉತ್ಸಾಹವನ್ನು ಅಭಿನಂದಿಸುತ್ತೇವೆ” ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1717716) ವಿಸಿಟರ್ ಕೌಂಟರ್ : 358