ಪ್ರಧಾನ ಮಂತ್ರಿಯವರ ಕಛೇರಿ

ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನದಂದು ಶುಶ್ರೂಷಕ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 12 MAY 2021 12:06PM by PIB Bengaluru

ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲ ಶುಶ್ರೂಷಕ ಸಿಬ್ಬಂದಿಗೂ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವು, ಕೋವಿಡ್ -19ರ ಸಂಕಷ್ಟದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಾ, ಕಠಿಣ ಪರಿಶ್ರಮದಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಆರೋಗ್ಯಪೂರ್ಣ ಭಾರತದ ಬಗೆಗಿನ ಅವರ ಕರ್ತವ್ಯ, ಅಂತಃಕರಣ ಮತ್ತು ಬದ್ಧತೆಯು ಅನುಕರಣೀಯ" ಎಂದು ತಿಳಿಸಿದ್ದಾರೆ.

***


(रिलीज़ आईडी: 1717880) आगंतुक पटल : 271
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam