ಪ್ರಧಾನ ಮಂತ್ರಿಯವರ ಕಛೇರಿ

ಸಂಸದ ಶ್ರೀ ರಘುನಾಥ್ ಮೊಹಾಪಾತ್ರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 09 MAY 2021 7:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸದ ಶ್ರೀ ರಘುನಾಥ್ ಮೊಹಾಪಾತ್ರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಸಂಸದ ಶ್ರೀ ರಘುನಾಥ ಮೊಹಾಪಾತ್ರ ಜಿ ಅವರ ನಿಧನದಿಂದ ದುಃಖವಾಗಿದೆ. ಅವರು ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿಯ ಜಗತ್ತಿಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಸಾಂಪ್ರದಾಯಿಕ ಕರಕುಶಲ ಕಲೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅವರ ಕೊಡುಗೆಗಳು ಸ್ಮರಣೀಯ. ಕುಟುಂಬದವರು ಮತ್ತು ಅನುಯಾಯಿಗಳಿಗೆ ನನ್ನ ಸಾಂತ್ವಾನಗಳಿವೆ. ಓಂ ಶಾಂತಿ’’ ಎಂದು ಹೇಳಿದ್ದಾರೆ.

***


(Release ID: 1717996) Visitor Counter : 169