ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಹಿಮಂತ ಬಿಸ್ವ ಶರ್ಮಾ ಗೆ ಪ್ರಧಾನಿ ಅಭಿನಂದನೆ
Posted On:
10 MAY 2021 1:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಸಚಿವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ ಇಂದು ಪ್ರಮಾಣವಚನ ಸ್ವೀಕರಿಸಿದ ಹಿಮಂತ ಬಿಸ್ವ ಜಿ ಮತ್ತು ಇತರ ಸಚಿವರನ್ನು ನಾನು ಅಭಿನಂದಿಸುತ್ತೇನೆ. ಈ ತಂಡವು ಅಸ್ಸಾಂನ ಅಭಿವೃದ್ಧಿಯ ಪಯಣಕ್ಕೆ ಮತ್ತಷ್ಟು ವೇಗವನ್ನು ನೀಡುತ್ತದೆ ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂಬ ವಿಶ್ವಾಸ ನನಗಿದೆ’’ ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ಶ್ರೀ ಸರ್ಬಾನಂದ ಸೋನೋವಾಲ್ ಅವರ ಕೊಡುಗೆಯನ್ನೂ ಸಹ ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ ನನ್ನ ಒಳ್ಳೆಯ ಸಹೋದ್ಯೋಗಿ ಸರ್ಬಾನಂದ ಸೋನೋವಾಲ ಜಿ ಅವರು ಕಳೆದ ಐದು ವರ್ಷಗಳಲ್ಲಿ ಜನಪರ ಮತ್ತು ಅಭಿವೃದ್ಧಿ ಪರ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಅಸ್ಸಾಂನ ಪ್ರಗತಿ ನಿಟ್ಟಿನಲ್ಲಿ ಮತ್ತು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಅವರು ನೀಡಿರುವ ಕೊಡುಗೆ ಅಪಾರ’’ಎಂದು ಹೇಳಿದ್ದಾರೆ.
***
(Release ID: 1718000)
Visitor Counter : 232
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam