ಪ್ರಧಾನ ಮಂತ್ರಿಯವರ ಕಛೇರಿ
ಕೇಂದ್ರದ ಮಾಜಿ ಸಚಿವ ಶ್ರೀ ಛಮನ್ ಲಾಲ್ ಗುಪ್ತ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
18 MAY 2021 1:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರದ ಮಾಜಿ ಸಚಿವ ಶ್ರೀ ಛಮನ್ ಲಾಲ್ ಗುಪ್ತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶ್ರೀ ಛಮನ್ ಲಾಲ್ ಗುಪ್ತ ಅವರು ಕೈಗೊಳ್ಳುತ್ತಿದ್ದ ಅಸಂಖ್ಯಾತ ಸಮುದಾಯ ಸೇವಾ ಪ್ರಯತ್ನಗಳಿಂದಾಗಿ ಅವರನ್ನು ಸ್ಮರಿಸಲಾಗುವುದು. ಅವರು ಬದ್ಧತೆ ಇದ್ದ ಶಾಸಕರಾಗಿದ್ದರು ಮತ್ತು ಜಮ್ಮು-ಕಾಶ್ಮೀರದಾದ್ಯಂತ ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸಿದ್ದರು. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಈ ದುಃಖದ ಸಂದರ್ಭದಲ್ಲಿ ಸಾಂತ್ವನ ಹೇಳುತ್ತಿದ್ದೇನೆ, ಓಂ ಶಾಂತಿ.”
***
(Release ID: 1719594)
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam