ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ನಡುವೆ ದೂರವಾಣಿ ಸಮಾಲೋಚನೆ

Posted On: 26 MAY 2021 8:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಕೋವಿಡ್ ನಿರ್ವಹಣೆಗೆ ಫ್ರಾನ್ಸ್ ನೀಡುತ್ತಿರುವ ನೆರವಿಗಾಗಿ ಅಧ್ಯಕ್ಷ ಮ್ಯಾಕ್ರೋನ್ ಅವರಿಗೆ ಧನ್ಯವಾದಗಳನ್ನು ಹೇಳಿದರು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು ಚರ್ಚೆ ನಡೆಸಿದರು ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಭಾರತಐರೋಪ್ಯ ಒಕ್ಕೂಟದ ರಾಷ್ಟ್ರಗಳ ನಾಯಕರ ಸಭೆಯ ಸಕಾರಾತ್ಮಕ ಫಲಿತಾಂಶದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಸಮತೋಲಿತ ಮತ್ತು ಸಮಗ್ರ ಮುಕ್ತ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳಿಗಾಗಿ  ಮಾತುಕತೆಗಳನ್ನು ಪುನಾರಂಭಿಸುವ  ಹಾಗೂ ಭಾರತ ಐರೋಪ್ಯ ಒಕ್ಕೂಟ ಸಂಪರ್ಕ ಪಾಲುದಾರಿಕೆ ಎರಡೂ ಸ್ವಾಗತಾರ್ಹ ಹಂತಗಳಾಗಿವೆ ಎಂದು ಉಭಯ ನಾಯಕರು ಒಪ್ಪಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತ ಫ್ರಾನ್ಸ್ ಕಾರ್ಯತಂತ್ರ ಸಹಭಾಗಿತ್ವವು ಪಡೆದುಕೊಂಡಿರುವ ಆಳ ಮತ್ತು ಬಲವರ್ಧನೆ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಹಾಗೂ ಕೋವಿಡ್ ನಂತರದ ಯುಗದಲ್ಲಿ ಜೊತೆಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲು ಒಪ್ಪಿಕೊಂಡರು.  

ಪರಿಸ್ಥಿತಿ ಅನುಕೂಲಕರವಾದ ಕೂಡಲೇ ಶೀಘ್ರವೇ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮ್ಯಾಕ್ರೋನ್ ಅವರಿಗೆ ನೀಡಿದ್ದ ಆಹ್ವಾನವನ್ನು ಪುನರುಚ್ಚರಿಸಿದರು

***


(Release ID: 1722030) Visitor Counter : 216