ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ


ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನತೆಗೆ ನೀಡಲು ಇನ್ನೂ 1.57 ಕೋಟಿ ಡೋಸ್‌ಗಳು ಲಭ್ಯವಿವೆ

Posted On: 01 JUN 2021 10:12AM by PIB Bengaluru

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು    ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಇದಲ್ಲದೆ, ಭಾರತ ಸರಕಾರವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆಲಸಿಕೆಗಳನ್ನು ನೇರವಾಗಿ ಖರೀದಿಸಲು ಅನುಕೂಲ ಮಾಡಿಕೊಡುತ್ತಿದೆ. ಸಾಂಕ್ರಾಮಿಕದ ನಿಯಂತ್ರಣ ಮತ್ತು ನಿರ್ವಹಣೆಗೆ ಭಾರತ ಸರಕಾರ ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಕೋವಿಡ್‌-ಸೂಕ್ತ ನಡವಳಿಕೆ ಸೂತ್ರಗಳನ್ನು ಒಳಗೊಂಡ ಸಮಗ್ರ ಕಾರ್ಯತಂತ್ರವನ್ನು ಅನುಸರಿಸುತ್ತಿದ್ದು, ಲಸಿಕೆಯೂ ಇದರ ಅವಿಭಾಜ್ಯ ಅಂಗವಾಗಿದೆ.

ಕೋವಿಡ್-19 ಲಸಿಕೆಯ ಉದಾರೀಕರಣ ಹಾಗೂ ವೇಗವರ್ಧಿತ 3ನೇ ಹಂತದ ಕಾರ್ಯತಂತ್ರದ ಅನುಷ್ಠಾನವು 2021 ಮೇ 1 ರಿಂದ ಆರಂಭವಾಗಿದೆ.

ಭಾರತ ಸರಕಾರವು ಇದುವರೆಗೆ, ಉಚಿತವಾಗಿ ಮತ್ತು ರಾಜ್ಯ ಸರಕಾರಗಳಿಂದ ನೇರ ಖರೀದಿ ಮಾರ್ಗದ ಮೂಲಕ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳನ್ನು (23,18,36,510) ಒದಗಿಸಿದೆ.

ಪೈಕಿ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ ವ್ಯರ್ಥವಾದ ಡೋಸ್ಗಳೂ  ಸೇರಿದಂತೆ ಒಟ್ಟು 21,51,48,659 ಡೋಸ್ಗಳನ್ನು ಬಳಕೆ ಮಾಡಲಾಗಿದೆ (ಇಂದು ಬೆಳಿಗ್ಗೆ 8 ಗಂಟೆವರೆಗೆ ಲಭ್ಯವಿರುವ ದತ್ತಾಂಶದ ಪ್ರಕಾರ).

ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ನೀಡಲು ಇನ್ನೂ 1.57 ಕೋಟಿಗಿಂತಲೂ ಅಧಿಕ (1,57,74,331) ಡೋಸ್ಗಳು ಲಭ್ಯವಿವೆ.

***



(Release ID: 1723382) Visitor Counter : 225