ಪ್ರಧಾನ ಮಂತ್ರಿಯವರ ಕಛೇರಿ

ಜೂನ್ 4ರಂದು ಸಿಎಸ್ಐಆರ್ ಸೊಸೈಟಿ ಸಭೆಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

प्रविष्टि तिथि: 03 JUN 2021 9:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜೂನ್ 4ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಸೊಸೈಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.  

          ಈ ಸೊಸೈಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಡಿ ಬರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆಯ ಭಾಗವಾಗಿದೆ. ಇದರ ಕಾರ್ಯಚಟುವಟಿಕೆಗಳು ಭಾರತದಾದ್ಯಂತ 37 ಪ್ರಯೋಗಾಲಯಗಳು ಮತ್ತು 39 ಜನಸಂಪರ್ಕ ಕೇಂದ್ರಗಳ ಮೂಲಕ ನಡೆಯುತ್ತಿದೆ. ಖ್ಯಾತ ವಿಜ್ಞಾನಿಗಳು, ಕೈಗಾರಿಕೋದ್ಯಮಿಗಳು ಮತ್ತು ವೈಜ್ಞಾನಿಕ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸೊಸೈಟಿಯ ಭಾಗವಾಗಿದ್ದು, ಅವರೆಲ್ಲರೂ ವರ್ಷಕ್ಕೊಮ್ಮೆ ಸಭೆ ನಡೆಸಲಿದ್ದಾರೆ.

***


(रिलीज़ आईडी: 1724332) आगंतुक पटल : 200
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam