ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ತಾಜಾ ಮಾಹಿತಿ

प्रविष्टि तिथि: 07 JUN 2021 9:20AM by PIB Bengaluru

ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷ ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 61 ದಿನಗಳಲ್ಲಿ ಅತಿ ಕಡಿಮೆ ಪ್ರಕರಣಗಳು ಕಂಡು ಬಂದಿವೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡು ಬಂದಿದ್ದು, 14,01,609 ರಷ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 76,190 ರಷ್ಟು ಸಕ್ರಿ ಪ್ರಕರಣಗಳು ತಗ್ಗಿದೆ.

ದೇಶದಲ್ಲಿ ಈವರೆಗೆ 2,71,59,180 ಮಂದಿ ಚೇತರಿಸಿಕೊಂಡಿದ್ದು, ಒಂದೇ ದಿನದಲ್ಲಿ 1,74,399 ಮಂದಿ ಗುಣಮುಖರಾಗಿದ್ದಾರೆ.

ದೈನಂದಿನ ಗುಣಮುಖರಾಗುತ್ತಿರುವ ಪ್ರಮಾಣ ಸತತ 25 ದಿನಗಳಿಂದಲೂ ಏರಿಕೆಯಾಗುತ್ತಿದೆ. ಚೇತರಿಕೆ ದರ ಶೇ 93.94% ರಷ್ಟಿದೆ.

ಪ್ರಸ್ತುತ ವಾರದ ಪಾಸಿಟಿವಿಟಿ ದರ ಶೇ 6.21 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 6.34 ರಷ್ಟಿದೆ. ಸತತ 14 ದಿನಗಳಿಂದ ಪಾಸಿಟಿವಿಟಿ ದರ ಶೇ 10ಕ್ಕಿಂತಲೂ ಕಡಿಮೆ ಇವೆಪರೀಕ್ಷೆಗಳ ಪ್ರಮಾಣ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ವರೆಗೆ 36.6 ಕೋಟಿ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ದೇಶಾದ್ಯಂತ ಲಸಿಕಾ ಅಭಿಯಾನದಲ್ಲಿ 23.27 ಕೋಟಿ ಡೋಸ್ ಲಸಿಕೆಗಳನ್ನು ಹಾಕಲಾಗಿದೆ.

***


(रिलीज़ आईडी: 1725022) आगंतुक पटल : 229
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam