ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದ ಕೆಲವೆಡೆ ಮಿಂಚು-ಸಿಡಿಲಿನಿಂದ ಜೀವ ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ: ಸಂತ್ರಸ್ತರಿಗೆ ಪರಿಹಾರಕ್ಕೆ ಅನುಮೋದನೆ

Posted On: 07 JUN 2021 9:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಮಿಂಚು ಸಿಡಿಲಿನಿಂದ ಸಂಭವಿಸಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಮಿಂಚು-ಸಿಡಿಲಿನಿಂದ ತಮ್ಮ ಹತ್ತಿರದ ಬಂಧು ಬಾಂಧವರನ್ನು ಕಳೆದುಕೊಂಡವರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ’’ ಎಂದು ಹೇಳಿದ್ದಾರೆ.

ಅಲ್ಲದೆ, ಪ್ರಧಾನಮಂತ್ರಿ ಅವರು ಮೃತರ ಕುಟುಂಬದವರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ  2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

***


(Release ID: 1725210) Visitor Counter : 189