ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ವರದಿ ಪರಿಷ್ಕರಣೆ

Posted On: 09 JUN 2021 9:46AM by PIB Bengaluru

ದೇಶದಲ್ಲಿ ಕೋವಿಡ್ 2ನೇ ಅಲೆ ಕಾಣಿಸಿಕೊಂಡ 57 ದಿನಗಳ ತರುವಾಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಅದೀಗ 13 ಲಕ್ಷ (12,31,415) ಮಟ್ಟದಿಂದ ಕೆಳಕ್ಕೆ ತಗ್ಗಿದೆ.

ಕಳೆದ 24 ತಾಸುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 72,287ಕ್ಕೆ ಇಳಿಕೆ ಕಂಡಿದೆ.

ಸತತ 2ನೇ ದಿನ ಹೊಸ ಪ್ರಕರಣಗಳ ಸಂಖ್ಯೆ 1 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ಇಳಿದಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 92,596 ಹೊಸ ಪ್ರಕರಣಗಳು ವರದಿಯಾಗಿವೆ.

ದೇಶಾದ್ಯಂತ ಇಲ್ಲಿಯ ತನಕ 2,75,04,126 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 1,62,664 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಸತತ 27ನೇ ದಿನದಲ್ಲೂ ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಪ್ರಕರಣಗಳಿಗಿಂತ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಏರಿಕೆ ಕಾಣುತ್ತಿದೆ.

ಚೇತರಿಕೆ ದರ ಶೇಕಡ 94.55ಕ್ಕೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ ಪ್ರಸ್ತುತ 5.66% ಇದೆ.

ದೈನಂದಿನ ಪಾಸಿಟಿವಿಟಿ ದರ 4.66% ಇದ್ದು, ನಿರಂತರ 16ನೇ ದಿನದಲ್ಲಿ 10% ಒಳಗೆ ಕಾಯ್ದುಕೊಂಡಿದೆ.

ಕೋವಿಡ್ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿದ್ದು, ಇಲ್ಲಿಯ ತನಕ 37.01 ಕೋಟಿ ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.

ದೇಶವ್ಯಾಪಿ ನಡೆಯುತ್ತಿರುವ ಬೃಹತ್ ಲಸಿಕೆ ಆಂದೋಲನದಲ್ಲಿ ಇಲ್ಲಿಯ ತನಕ 23.9 ಕೋಟಿ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.

***



(Release ID: 1725565) Visitor Counter : 215