ಪ್ರಧಾನ ಮಂತ್ರಿಯವರ ಕಛೇರಿ

ಕಾನ್ಪುರ ರಸ್ತೆ ಅಪಘಾತಕ್ಕೆ ಪ್ರಧಾನ ಮಂತ್ರಿ ಅವರಿಂದ ಸಂತಾಪ


ಸಂತ್ರಸ್ತರಿಗೆ ಪರಿಹಾರ ಪ್ರಕಟ

ಪ್ರಕಟಣಾ ದಿನಾಂಕ: 09 JUN 2021 8:35AM by PIB Bengaluru

ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, ಅಪಘಾತದಲ್ಲಿ ಮಡಿದವರ ಕುಟುಂಬ ವರ್ಗ ಮತ್ತು ಬಂಧುಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

 

ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1725634) ವಿಸಿಟರ್ ಕೌಂಟರ್ : 259