ಪ್ರಧಾನ ಮಂತ್ರಿಯವರ ಕಛೇರಿ

47 ನೇ ಜಿ 7 ಶೃಂಗದಲ್ಲಿ ಪ್ರಧಾನ ಮಂತ್ರಿ ಪಾಲ್ಗೊಳ್ಳಲಿದ್ದಾರೆ

Posted On: 10 JUN 2021 6:34PM by PIB Bengaluru

ಇಂಗ್ಲಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 12 ಮತ್ತು 13 ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ ಜಿ.7 ಶೃಂಗದ ಬಾಹ್ಯ  (ಔಟ್ ರೀಚ್) ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ  ಇಂಗ್ಲಂಡ್ ಯು ಜಿ.7 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ ಮತ್ತು ಅದು ಭಾರತ, ಆಸ್ಟ್ರೇಲಿಯಾ, ಕೊರಿಯಾ ಗಣತಂತ್ರ ಮತ್ತು ದಕ್ಷಿಣ ಆಫ್ರಿಕಾಗಳನ್ನು ಜಿ.7 ಶೃಂಗಕ್ಕೆ ಅತಿಥಿ ರಾಷ್ಟ್ರಗಳನ್ನಾಗಿ ಆಹ್ವಾನಿಸಿದೆ. ಹೈಬ್ರಿಡ್ ಮಾದರಿಯಲ್ಲಿ ಸಭೆ ನಡೆಯಲಿದೆ.

ಉತ್ತಮವಾಗಿ ಮರು ನಿರ್ಮಾಣ ಮಾಡಿಎಂಬುದು ಶೃಂಗದ ವಿಷಯ ಶೀರ್ಷಿಕೆಯಾಗಿದೆ ಮತ್ತು ಇಂಗ್ಲೆಂಡ್ ಅದರ ಅಧ್ಯಕ್ಷತೆಗೆ ನಾಲ್ಕು ಆದ್ಯತಾ ರಂಗಗಳನ್ನು ರೂಪಿಸಿದೆ. ಅವುಗಳೆಂದರೆ ಕೊರೊನಾದಿಂದ ಜಾಗತಿಕ ಪುನಶ್ಚೇತನ; ಭವಿಷ್ಯದ ಜಾಗತಿಕ ಸಾಂಕ್ರಾಮಿಕಗಳ ವಿರುದ್ಧ ಪುನಶ್ಚೇತನವನ್ನು ಬಲಪಡಿಸುವುದು; ಮುಕ್ತ ಮತ್ತು ನ್ಯಾಯೋಚಿತ ವ್ಯಾಪಾರವನ್ನು ಪ್ರಚುರಪಡಿಸುವ ಮೂಲಕ ಭವಿಷ್ಯದ ಸಮೃದ್ಧಿಗೆ ಉತ್ತೇಜನ; ವಾತಾವರಣ ಬದಲಾವಣೆಯನ್ನು ನಿಭಾಯಿಸುವುದು ಮತ್ತು ಭೂಗ್ರಹದ ಜೀವವೈವಿಧ್ಯವನ್ನು ಕಾಪಾಡುವುದು, ಹಂಚಿಕೊಂಡ ಮೌಲ್ಯಗಳು ಹಾಗು ಮುಕ್ತ ಸಮಾಜಗಳನ್ನು ಬೆಂಬಲಿಸುವುದು. ಆರೋಗ್ಯ ಮತ್ತು ವಾತಾವರಣ ಬದಲಾವಣೆಗೆ ಗಮನ ನೀಡಿ ಜಾಗತಿಕ ಸಾಂಕ್ರಾಮಿಕದಿಂದ ಪುನಶ್ಚೇತನ ಕುರಿತಂತೆ ನಾಯಕರು ವಿಚಾರ ವಿನಿಮಯ ನಡೆಸುವ ನಿರೀಕ್ಷೆ ಇದೆ.

ಜಿ.7 ಸಭೆಯಲ್ಲಿ ಪ್ರಧಾನ ಮಂತ್ರಿ ಪಾಲ್ಗೊಳ್ಳುತ್ತಿರುವುದು ಇದು ಎರಡನೇ ಬಾರಿ. 2019 ರಲ್ಲಿ ಫ್ರೆಂಚ್ ಅಧ್ಯಕ್ಷತೆಯಲ್ಲಿ ನಡೆದ ಜಿ.7 ಬಿರ್ರಿಟ್ಜ್ ಸಮಿತಿಯಲ್ಲಿ ಸದ್ಭಾವನಾ ಪಾಲುದಾರನಾಗಿ ಪಾಲ್ಗೊಳ್ಳಲು ಭಾರತಕ್ಕೆ ಆಹ್ವಾನ ನೀಡಲಾಗಿತ್ತು ಮತ್ತು ಪ್ರಧಾನ ಮಂತ್ರಿ ಅವರು ವಾತಾವರಣ, ಜೀವ ವೈವಿಧ್ಯ ಮತ್ತು ಸಾಗರಗಳುಹಾಗು ಡಿಜಿಟಲ್ ಪರಿವರ್ತನೆಅಧಿವೇಶನಗಳಲ್ಲಿ ಭಾಗವಹಿಸಿದ್ದರು.

***


(Release ID: 1726059) Visitor Counter : 259