ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಭಾರತದ ಸಕ್ರಿಯ ಪ್ರಕರಣಗಳ ಹೊರೆಯು 70 ದಿನಗಳ ನಂತರ 9 ಲಕ್ಷಕ್ಕಿಂತ ಕಡಿಮೆಯಾಗಿದೆ
ಕಳೆದ 24 ಗಂಟೆಗಳಲ್ಲಿ 62,224 ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ
ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ದೈನಂದಿನ ಚೇತರಿಕೆಗಳ ಸಂಖ್ಯೆಯು ಪ್ರತಿದಿನ ವರದಿಯಾಗುವ ಹೊಸ ಪ್ರಕರಣಗಳ ಸಂಖ್ಯೆಗಿಂತ ಹೆಚ್ಚಾಗಿದೆ.
ಚೇತರಿಕೆಯ ದರ 95.80%ರಷ್ಟು ಹೆಚ್ಚಾಗಿದೆ
ದೈನಂದಿನ ದೃಢಪಟ್ಟ ಪ್ರಕರಣಗಳ ದರವು ಮತ್ತಷ್ಟು 3.22% ರಷ್ಟಿದೆ, ಇದು ಸತತ 9 ದಿನಗಳವರೆಗೆ 5% ಕ್ಕಿಂತ ಕಡಿಮೆಯಿದೆ.
Posted On:
16 JUN 2021 10:52AM by PIB Bengaluru
ದೈನಂದಿನ ಹೊಸ ಕೋವಿಡ್ ಪ್ರಕರಣಗಳಲ್ಲಿ ಭಾರತವು ನಿರಂತರ ಇಳಿಮುಖವನ್ನು ವರದಿ ಮಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶವು 62,224 ದೈನಂದಿನ ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಸತತ 9 ದಿನಗಳವರೆಗೆ 1 ಲಕ್ಷಕ್ಕಿಂತ ಕಡಿಮೆ ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ. ಇದು ಕೇಂದ್ರ ಮತ್ತು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ನಿರಂತರ ಮತ್ತು ಸಹಯೋಗದ ಪ್ರಯತ್ನಗಳ ಫಲಿತಾಂಶವಾಗಿದೆ.
ಭಾರತದಲ್ಲಿ ಸಕ್ರಿಯ ಪ್ರಕರಣಗಳ ಹೊರೆಯಲ್ಲಿ ನಿರಂತರವಾಗಿ ಕುಸಿತ ಕಂಡುಬರುತ್ತಿದೆ. ದೇಶದ ಸಕ್ರಿಯ ಪ್ರಕರಣಗಳ ಹೊರೆಯು ಇಂದು 8,65,432ರಷ್ಟಿದೆ. ಸಕ್ರಿಯ ಪ್ರಕರಣಗಳ ಹೊರೆಯು 70 ದಿನಗಳ ನಂತರ 9 ಲಕ್ಷಕ್ಕಿಂತ ಕಡಿಮೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 47,046ರ ನಿವ್ವಳ ಕುಸಿತ ಕಂಡುಬಂದಿದೆ ಮತ್ತು ಸಕ್ರಿಯ ಪ್ರಕರಣಗಳು ಈಗ ದೇಶದ ಒಟ್ಟು ದೃಢಪಟ್ಟ ಪ್ರಕರಣಗಳ ಕೇವಲ 2.92%ರಷ್ಟು ಮಾತ್ರ ಇದೆ.
ಕೋವಿಡ್ ಸೋಂಕಿನಿಂದ ಹೆಚ್ಚಿನ ಜನರು ಚೇತರಿಸಿಕೊಳ್ಳುತ್ತಿರುವ ಕಾರಣ, ಭಾರತದ ದೈನಂದಿನ ಚೇತರಿಕೆಗಳ ಪ್ರಮಾಣವು ಸತತ 34ನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ. ಕಳೆದ 24 ಗಂಟೆಗಳಲ್ಲಿ 1,07,628 ಗುಣಮುಖರಾದ ಪ್ರಕರಣಗಳು ವರದಿಯಾಗಿವೆ.
ದೈನಂದಿನ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ 45 ಸಾವಿರಕ್ಕಿಂತ (45,404) ಹೆಚ್ಚಿನ ಚೇತರಿಕೆಯ ಪ್ರಕರಣಗಳು ವರದಿಯಾಗಿದೆ.
ಸಾಂಕ್ರಾಮಿಕ ರೋಗದ ಆರಂಭದಿಂದಲೂ ಸೋಂಕಿತರಲ್ಲಿ 2,83,88,100 ಜನರು ಈಗಾಗಲೇ ಕೋವಿಡ್-19 ರಿಂದ ಚೇತರಿಸಿಕೊಂಡಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 1,07,628 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರಿಂದಾಗಿ ಒಟ್ಟಾರೆ ಚೇತರಿಕೆ ದರವು 95.80% ಆಗಿದ್ದು, ಇದು ಚೇತರಿಕೆಯ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿರುವುದನ್ನು ತೋರಿಸುತ್ತಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು ಕಳೆದ 24 ಗಂಟೆಗಳಲ್ಲಿ ಒಟ್ಟು 19,30,987 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇಲ್ಲಿಯವರೆಗೆ ಭಾರತದಲ್ಲಿ 38.33 ಕೋಟಿ (38,33,06,971) ಪರೀಕ್ಷೆಗಳನ್ನು ನಡೆಸಲಾಗಿದೆ.
ದೇಶಾದ್ಯಂತ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ, ಸಾಪ್ತಾಹಿಕ ದೃಢಪಟ್ಟ ಪ್ರಕರಣಗಳಲ್ಲಿ ನಿರಂತರ ಕುಸಿತವು ಕಂಡುಬರುತ್ತಿದೆ. ಸಾಪ್ತಾಹಿಕ ಸಕಾರಾತ್ಮಕ ದೃಢಪಟ್ಟ ಪ್ರಕರಣಗಳ ದರವು ಪ್ರಸ್ತುತ 4.17% ರಷ್ಟಿದ್ದರೆ, ದೈನಂದಿನ ದೃಢಪಟ್ಟ ಪ್ರಕರಣಗಳ ದರವು ಇಂದು 3.22% ರಷ್ಟಿದೆ. ಈಗ ಇದು ಸತತ ಒಂಬತ್ತು ದಿನಗಳವರೆಗೆ 5% ಕ್ಕಿಂತ ಕಡಿಮೆಯಿದೆ.
ಭಾರತದಲ್ಲಿ ನಿನ್ನೆ ಲಸಿಕಾಕರಣವು 26 ಕೋಟಿಯನ್ನು ದಾಟಿದೆ. ತಾತ್ಕಾಲಿಕ ವರದಿಯ ಪ್ರಕಾರ ಇಂದು ಬೆಳಿಗ್ಗೆ 7 ಗಂಟೆಯವರೆಗೆ ಒಟ್ಟು 26,19,72,014 ಲಸಿಕೆ ಡೋಸ್ ಗಳನ್ನು 36,17,099 ಸೆಷನ್‌ಗಳ ಮೂಲಕ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 28,00,458 ಲಸಿಕೆ ಡೋಸ್ ಗಳನ್ನು ನೀಡಲಾಯಿತು.
ಅವುಗಳ ವಿವರ ಹೀಗಿದೆ:
ಎಚ್ ಸಿಡಬ್ಲ್ಯೂ
|
1 ನೇ ಡೋಸ್
|
1,00,79,330
|
2 ನೇ ಡೋಸ್
|
70,00,612
|
ಎಫ್ ಎಲ್‌ಡಬ್ಲ್ಯೂ
|
1 ನೇ ಡೋಸ್
|
1,69,10,170
|
2 ನೇ ಡೋಸ್
|
89,10,305
|
18 - 44 ವರ್ಷದವರು
|
1 ನೇ ಡೋಸ್
|
4,51,03,965
|
2 ನೇ ಡೋಸ್
|
9,00,035
|
45 ರಿಂದ 60 ವರ್ಷದವರು
|
1 ನೇ ಡೋಸ್
|
7,72,98,842
|
2 ನೇ ಡೋಸ್
|
1,22,00,449
|
60 ವರ್ಷಕ್ಕಿಂತ ಮೇಲ್ಪಟ್ಟವರು
|
1 ನೇ ಡೋಸ್
|
6,32,89,614
|
2 ನೇ ಡೋಸ್
|
2,02,78,692
|
ಒಟ್ಟು
|
26,19,72,014
|
****
(Release ID: 1727483)
Visitor Counter : 219
Read this release in:
Marathi
,
Tamil
,
Telugu
,
Malayalam
,
English
,
Urdu
,
Hindi
,
Bengali
,
Punjabi
,
Gujarati
,
Odia