ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ನ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ


ಸಂತ್ರಸ್ತರ ಕುಟುಂಬಕ್ಕೆ ಪರಿಹಾರದ ಘೋಷಣೆ

प्रविष्टि तिथि: 16 JUN 2021 2:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಆನಂದ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿನ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ಅವರು ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್ ನಲ್ಲಿ, "ಗುಜರಾತ್ ಆನಂದ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿನ ಜೀವ ಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಆಪ್ತೆಷ್ಟರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ನೀಡಲಾಗುವುದು: PM @narendramodi" ಎಂದು ತಿಳಿಸಲಾಗಿದೆ.

***


(रिलीज़ आईडी: 1728073) आगंतुक पटल : 170
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam