ಪ್ರಧಾನ ಮಂತ್ರಿಯವರ ಕಛೇರಿ

ಡಿಪಿಐಐಟಿ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಹಾಪಾತ್ರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 19 JUN 2021 10:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಪಿಐಐಟಿ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಹಾಪಾತ್ರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಡಿಪಿಐಐಟಿ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಹಾಪಾತ್ರ ನಿಧನದಿಂದ ದುಃಖವಾಗಿದೆ. ನಾನು ಅವರ ಜೊತೆ ಗುಜರಾತ್ ನಲ್ಲಿ ಮತ್ತು ಕೇಂದ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದೆ. ಆಡಳಿತಾತ್ಮಕ ವಿಷಯಗಳ ಬಗ್ಗೆ ಉತ್ತಮ ತಿಳಿವಳಿಕೆ ಹೊಂದಿದ್ದ ಅವರು ಹೊಸತನದ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ ಮತ್ತು ಮಿತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ’’ಎಂದು ಹೇಳಿದ್ದಾರೆ.

 

****
 


(रिलीज़ आईडी: 1728478) आगंतुक पटल : 175
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam