ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 20 JUN 2021 9:13AM by PIB Bengaluru

ದೇಶದಲ್ಲಿ ಕಾಣಿಸಿಕೊಂಡಿರುವ ಕೋವಿಡ್-19 2ನೇ ಅಲೆಯ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕು ನಿಯಂತ್ರಣದಲ್ಲಿ ಯಶಸ್ವಿಯಾಗುತ್ತಿದೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷದ ಮಟ್ಟದಿಂದ ಕೆಳಗಿದ್ದು, ಅದೀಗ 7,29,243ಕ್ಕೆ ಇಳಿಕೆ ಕಂಡಿದೆ.

81 ದಿನಗಳ ನಂತರ ದೈನಂದಿನ ಹೊಸ ಕೊರೊನಾ ಪ್ರಕಣಗಳ ಸಂಖ್ಯೆ 60 ಸಾವಿರ ಮಟ್ಟದಿಂದ ಕೆಳಗಿದ್ದು, ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 58,419 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದೇಶಾದ್ಯಂತ ಇಲ್ಲಿಯ ತನಕ 2,87,66,009 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 87,619 ರೋಗಿಗಳು ಗುಣಮುಖರಾಗಿದ್ದಾರೆ.

ಸತತ 38ನೇ ದಿನದಲ್ಲಿ ದೈನಂದಿನ ಚೇತರಿಕೆ ಪ್ರಕರಣಗಳು ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹಿಂದಿಕ್ಕುತ್ತಿದೆ.

ಇದರೊದಿಗೆ ಚೇತರಿಕೆ ಪ್ರಮಾಣ 96.27%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗಿದ್ದು, ಅದೀಗ 3.43%ಗೆ ತಗ್ಗಿದೆ.

ಸತತ 13ನೇ ದಿನದಲ್ಲಿ ದೈನಂದಿನ ಪಾಸಿಟಿವಿಟಿ ದರ(ಸೋಂಕಿತರ ಸಂಖ್ಯೆ)ವೂ 5% ಒಳಗಿದ್ದು, ಅದೀಗ 3.22%ಗೆ ಇಳಿಕೆ ಕಂಡಿದೆ.

ದೇಶಾದ್ಯಂತ ಗಂಟಲು ದ್ರವ ಪರೀಕ್ಷಾ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದ್ದು, ಇದುವರೆಗೆ 39.10 ಕೋಟಿ ಜನರಿಗೆ ಪರೀಕ್ಷೆ ನಡೆಸಲಾಗಿದೆ.

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಲಸಿಕಾ ಆಂದೋಲನದಲ್ಲಿ ಇದುವರೆಗೆ 27.66 ಕೋಟಿ ಲಸಿಕೆ ಡೋಸ್|ಗಳನ್ನು ನೀಡಲಾಗಿದೆ.

***


(Release ID: 1728723) Visitor Counter : 207