ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

ಪ್ರಕಟಣಾ ದಿನಾಂಕ: 24 JUN 2021 9:22AM by PIB Bengaluru

ದೇಶಾದ್ಯಂತ ಹಮ್ಮಿಕೊಂಡಿರುವ ಬೃಹತ್ ಕೋವಿಡ್-19 ಲಸಿಕಾ ಆಂದೋಲನದ ಅಡಿ ನಿನ್ನೆ ಒಂದೇ ದಿನ 64.89 ಲಕ್ಷ ಲಸಿಕೆ ಡೋಸ್ ಹಾಕಲಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟು 30.16  ಲಸಿಕಾ ಡೋಸ್ಗಳನ್ನು ನೀಡಲಾಗಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 54,069 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 6,27,057ಕ್ಕೆ ಇಳಿಕೆ ಕಂಡಿದೆ.

ಇದುವರೆಗೆ ದೇಶಾದ್ಯಂತ 2,90,63,740 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 68,885 ಮಂದಿ ರೋಗದಿಂದ ಚೇತರಿಸಿಕೊಂಡಿದ್ದಾರೆ.

ದೈನಂದಿನ ಚೇತರಿಕೆ ಪ್ರಮಾಣ ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹಿಂದಿಕ್ಕುತ್ತಿದೆ. 42 ದಿನದಲ್ಲೂ ಪ್ರವೃತ್ತಿ ಮುಂದುವರಿದಿದೆ.

ಇದರೊಂದಿಗೆ ಚೇತರಿಕೆ ದರವೀಗ 96.61%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ (ಸೋಂಕಿತರ ಸಂಖ್ಯೆ) 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಅದೀಗ 3.04% ಇದೆ.

ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದಿಂದ ಕೆಳಗಿದ್ದು, ಅದೀಗ ಸತತ 16ನೇ ದಿನದಲ್ಲಿ 2.91%ಗೆ ತಗ್ಗಿದೆ.

ದೇಶದೆಲ್ಲೆಡೆ ಗಂಟಲು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇಲ್ಲಿಯ ತನಕ 39.78 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(ಪ್ರಕಟಣೆ ಐ.ಡಿ.: 1730102) ವಿಸಿಟರ್ ಕೌಂಟರ್ : 235
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam