ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ತಾಜಾ ಮಾಹಿತಿ


ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರಕಾರ 30.54 ಕೋಟಿಗಿಂತಲೂ ಅಧಿಕ ಲಸಿಕೆ ಡೋಸ್ಗಳನ್ನು ಒದಗಿಸಿದೆ

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನರಿಗೆ ನೀಡಲು ಇನ್ನೂ 1.50 ಕೋಟಿ ಡೋಸ್‌ಗಳು ಲಭ್ಯವಿವೆ

ಪ್ರಕಟಣಾ ದಿನಾಂಕ: 25 JUN 2021 9:56AM by PIB Bengaluru

ಕೋವಿಡ್-19 ಲಸಿಕೀರಣದ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಹಾಗೂ ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೀಕರಣದ ಸಾರ್ವತ್ರಿಕೀಕರಣದ ಹೊಸ ಹಂತವು 2021 ಜೂನ್ 21ರಿಂದ ಪ್ರಾರಂಭವಾಗಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಗಡವಾಗಿಯೇ ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ಇತ್ಯಾದಿ ಕ್ರಮಗಳ ಮೂಲಕ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಇದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲು ನೆರವಾಗಲಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರಿಕರಣದ ಹೊಸ ಹಂತದಲ್ಲಿ, ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ರಾಜ್ಯಗಳಿಗೆ ಕೇಂದ್ರ ಸರಕಾರವೇ ಖರೀದಿಸಿ ಪೂರೈಕೆ ಮಾಡಲಿದೆ.

ಭಾರತ ಸರಕಾರವು ಇದುವರೆಗೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ, ಭಾರತ ಸರಕಾರದ ಮೂಲಕ (ಉಚಿತವಾಗಿ) ಮತ್ತು             ನೇರ ರಾಜ್ಯಗಳಿಂದ ನೇರ ಖರೀದಿ ಮಾರ್ಗದ ಮೂಲಕ 30.54 ಕೋಟಿ  (30,54,32,450) ಲಸಿಕೆ ಡೋಸ್‌ಗಳನ್ನು ಒದಗಿಸಿದೆ

ಇದರಲ್ಲಿ, ವ್ಯರ್ಥವಾದ ಡೋಸ್‌ಗಳೂ ಸೇರಿದಂತೆ ಒಟ್ಟು 29,04,04,264  ಡೋಸ್‌ಗಳನ್ನು  ಬಳಸಲಾಗಿದೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿದ್ದ ದತ್ತಾಂಶದ ಪ್ರಕಾರ).

1.50  ಕೋಟಿಗೂ ಅಧಿಕ (1,50,28,186) ಡೋಸ್‌ಗಳು ಉಳಿದಿವೆ, ಬಳಕೆಯಾಗದ   ಕೋವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿವೆ.

ಇದಲ್ಲದೆ, 47,00,000ಕ್ಕೂ ಅಧಿಕ ಲಸಿಕೆ ಡೋಸ್‌ಗಳು ಮಾರ್ಗ ಮಧ್ಯದಲ್ಲಿದ್ದು, ಮುಂದಿನ 3 ದಿನಗಳಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಲಿವೆ.

***


(ಪ್ರಕಟಣೆ ಐ.ಡಿ.: 1730293) ವಿಸಿಟರ್ ಕೌಂಟರ್ : 236
ಪ್ರಕಟಣೆಯನ್ನು ಇದರಲ್ಲಿ ಓದಿ: Tamil , Malayalam , English , Urdu , Marathi , हिन्दी , Bengali , Punjabi , Gujarati , Odia