ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಭಾರತದ ಕೋವಿಡ್ -19 ಲಸಿಕಾ ವ್ಯಾಪ್ತಿ 32 ಕೋಟಿಯ ಮೈಲಿಗಲ್ಲು ದಾಟಿದೆ


ಕಳೆದ 24 ಗಂಟೆಗಳಲ್ಲಿ 64.25 ಲಕ್ಷ ಲಸಿಕಾ ಡೋಸ್ ಗಳನ್ನು ಹಾಕಲಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ ದೈನಿಕ ಹೊಸ ಪ್ರಕರಣಗಳು 50,040

ಭಾರತದ ಸಕ್ರಿಯ ಪ್ರಕರಣಗಳ ಹೊರೆ ಇನ್ನಷ್ಟು ಇಳಿಕೆಯಾಗಿ 5,86,403
ರಲ್ಲಿದೆ

ಸತತ 45 ನೇ ದಿನವೂ ದೈನಿಕ ಹೊಸ ಪ್ರಕರಣಗಳ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು

ಗುಣಮುಖ ದರ 96.75% ಗೆ ಏರಿಕೆ

ದೈನಿಕ ಪಾಸಿಟಿವ್ ದರ 2.82%,ರಲ್ಲಿದೆ. ಸತತ 20 ನೇ ದಿನವೂ ಪಾಸಿಟಿವ್ ದರ 5% ಗಿಂತ ಕೆಳಗಿದೆ

Posted On: 27 JUN 2021 11:27AM by PIB Bengaluru

ಪ್ರಮುಖ ಸಾಧನೆಯೊಂದರಲ್ಲಿ, ಭಾರತದ ಒಟ್ಟು ಲಸಿಕಾ ವ್ಯಾಪ್ತಿಯು ನಿನ್ನೆ 32 ಕೋಟಿಯನ್ನು ದಾಟಿದೆ. ಇಂದು ಬೆಳಿಗ್ಗೆ 7 ಗಂಟೆಯವರೆಗಿನ ತಾತ್ಕಾಲಿಕ ವರದಿಗಳ ಪ್ರಕಾರ ಒಟ್ಟು 42,79,210 ಅಧಿವೇಶನಗಳ ಮೂಲಕ 32,17,60,077 ಲಸಿಕಾ ಡೋಸ್ ಗಳನ್ನು ಹಾಕಲಾಗಿದೆ. ಕಳೆದ 24 ಗಂಟೆಗಳಲ್ಲಿ 64,25,893 ಲಸಿಕಾ ಡೋಸ್ ಗಳನ್ನು ಹಾಕಲಾಗಿದೆ.

ವಿವರಗಳು ಈ ಕೆಳಗಿನಂತಿವೆ:

ಕೋವಿಡ್ -19 ಲಸಿಕಾ ಕಾರ್ಯಕ್ರಮದ ಸಾರ್ವತ್ರೀಕರಣದ ಹೊಸ ಹಂತ 2021 ರ ಜೂನ್ 21ರಿಂದ ಆರಂಭವಾಗಿದೆ. ಕೇಂದ್ರ ಸರಕಾರ ಇದರ ವೇಗವನ್ನು ಹೆಚ್ಚಿಸಿ, ಕೋವಿಡ್ -19 ಲಸಿಕಾಕರಣದ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಬದ್ಧವಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 50,040 ಹೊಸ ಪ್ರಕರಣಗಳು ವರದಿಯಾಗಿವೆ.

ಸತತ 20 ನೇ ದಿನವೂ ದೈನಿಕ 1 ಲಕ್ಷಕ್ಕಿಂತ ಕಡಿಮೆ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಕೇಂದ್ರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸಂಯುಕ್ತವಾಗಿ ಅನುಸರಿಸಿದ ಪ್ರಯತ್ನಗಳಿಗೆ ದೊರೆತ ಫಲ ಇದಾಗಿದೆ.

ಭಾರತದ ಸಕ್ರಿಯ ಪ್ರಕರಣಗಳ ಹೊರೆ ಸತತ ಇಳಿಕೆಯಾಗುತ್ತಿದೆ. ಇಂದು ದೇಶದ ಸಕ್ರಿಯ ಪ್ರಕರಣಗಳ ಹೊರೆ 5,86,403 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 9,162 ನಿವ್ವಳ ಇಳಿಕೆ ಕಂಡು ಬಂದಿದೆ. ಮತ್ತು ದೇಶದ ಒಟ್ಟು ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಬರೇ 1.94% ರಷ್ಟಿದೆ.

ಕೋವಿಡ್ -19 ಸೋಂಕಿನಿಂದ ಹೆಚ್ಚು ಜನರು ಗುಣಮುಖರಾಗುತ್ತಿದ್ದು, ಭಾರತದ ದೈನಿಕ ಚೇತರಿಕೆ/ಗುಣಮುಖ ಪ್ರಕರಣಗಳ ಸಂಖ್ಯೆ ಸತತ 45 ನೇ ದಿನವೂ ದೈನಿಕ ಹೊಸ ಪ್ರಕರಣಗಳ ಸಂಖ್ಯೆಗಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 57,944 ಮಂದಿ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೈನಿಕ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖ ಪ್ರಕರಣಗಳು 8 ಸಾವಿರದಷ್ಟು (7,904) ಹೆಚ್ಚಾಗಿವೆ.

ಜಾಗತಿಕ ಸಾಂಕ್ರಾಮಿಕ ಆರಂಭಗೊಂಡಂದಿನಿಂದ ಸೋಂಕಿತರಾಗಿದ್ದವರಲ್ಲಿ 2,92,51,029 ಮಂದಿ ಈಗಾಗಲೇ ಕೋವಿಡ್ -19 ರಿಂದ ಗುಣಮುಖರಾಗಿದ್ದಾರೆ. ಮತ್ತು ಕಳೆದ 24 ಗಂಟೆಗಳಲ್ಲಿ 57,944 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಒಟ್ಟು ಗುಣಮುಖ ದರ 96.75%, ಆಗಿದೆ, ಅದು ಸುಸ್ಥಿರ ಹೆಚ್ಚಳದ ಪ್ರವೃತ್ತಿಯನ್ನು ದಾಖಲಿಸುತ್ತಿದೆ.

ದೇಶದಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಒಟ್ಟು 17,77,309 ಪರೀಕ್ಷೆಗಳನ್ನು ನಡೆಸಲಾಗಿದೆ ಮತ್ತು ಭಾರತವು ಇದುವರೆಗೆ ಒಟ್ಟು 40.42 ಕೋಟಿ (40,42,65,101) ಪರೀಕ್ಷೆಗಳನ್ನು ನಡೆಸಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದರೆ, ಸಾಪ್ತಾಹಿಕವಾಗಿ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಇಳಿಕೆ ಕಂಡು ಬಂದಿದೆ. ಸಾಪ್ತಾಹಿಕ ಪಾಸಿಟಿವ್ ದರ ಪ್ರಸ್ತುತ 2.91% ಇದೆ, ದೈನಿಕ ಪಾಸಿಟಿವ್ ದರ ಇಂದು 2.82% ಆಗಿದೆ. ಅದು ಸತತ 20ನೇ ದಿನವೂ 5% ಗಿಂತ ಕೆಳಗಿದೆ.

​​​​​​***



(Release ID: 1730700) Visitor Counter : 191