ಪ್ರಧಾನ ಮಂತ್ರಿಯವರ ಕಛೇರಿ

ಸಿರ್‌ಮೌರ್‌ನಲ್ಲಿ ಅಪಘಾತದಿಂದಾಗಿ ಉಂಟಾದ ಪ್ರಾಣಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ


ಪರಿಹಾರ ಪ್ರಕಟಿಸಿದ ಪ್ರಧಾನಿ

Posted On: 28 JUN 2021 10:58PM by PIB Bengaluru

ಹಿಮಾಚಲ ಪ್ರದೇಶದ ಸಿರ್‌ಮೌರ್‌ನಲ್ಲಿ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ರಕ್ತಸಂಬಂಧಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.  ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಟ್ವೀಟ್‌ನಲ್ಲಿ ಪ್ರಧಾನಿ ತಿಳಿಸಿದ್ದಾರೆ. 


ಟ್ವೀಟ್‌ ಹೀಗಿದೆ:


"ಹಿಮಾಚಲ ಪ್ರದೇಶದ ಸಿರ್‌ಮೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳಿಗಾಗಿ ನನ್ನ ಪ್ರಾರ್ಥನೆಗಳನ್ನು ಅರ್ಪಿಸುವೆ.  ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಹತ್ತಿರದ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಿ ಮೋದಿ

 

****
 


(Release ID: 1731095) Visitor Counter : 160