ಪ್ರಧಾನ ಮಂತ್ರಿಯವರ ಕಛೇರಿ

ಭಾರತರತ್ನ ಡಾ. ಭೀಮ್ ರಾವ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕಾಗಿ ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಕೇಂದ್ರವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಜನಪ್ರಿಯಗೊಳಿಸುತ್ತದೆ:ಪ್ರಧಾನಮಂತ್ರಿ

प्रविष्टि तिथि: 29 JUN 2021 7:19PM by PIB Bengaluru

ಗೌರವಾನ್ವಿತ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಯುವಜನರಲ್ಲಿ ಜನಪ್ರಿಯಗೊಳಿಸಲು ನೇತೃತ್ವ ವಹಿಸಿರುವ ಉತ್ತರ ಪ್ರದೇಶ ಸರ್ಕಾರವನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಲಖನೌ ನಲ್ಲಿನ ಭಾರತರತ್ನ ಡಾ. ಭೀಮರಾವ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರ ಗೌರವಾನ್ವಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಯುವಜನರಲ್ಲಿ ಮತ್ತಷ್ಟು ಜನಪ್ರಿಯಗೊಳಿಸುತ್ತದೆ.

ನಾನು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಈ ಪ್ರಯತ್ನವನ್ನು ಶ್ಲಾಘಿಸುತ್ತೇನೆ." ಎಂದು ತಿಳಿಸಿದ್ದಾರೆ.

 

****
 


(रिलीज़ आईडी: 1731378) आगंतुक पटल : 292
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam