ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ಕುರಿತ ತಾಜಾ ಮಾಹಿತಿ
ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರಕಾರ 32.13 ಕೋಟಿಗೂ ಅಧಿಕ ಲಸಿಕೆ ಡೋಸ್‌ಗಳನ್ನು ಒದಗಿಸಿದೆ
ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನರಿಗೆ ನೀಡಲು ಇನ್ನೂ 73 ಲಕ್ಷಕ್ಕಿಂತಲೂ ಹೆಚ್ಚು ಡೋಸ್‌ಗಳು ಲಭ್ಯವಿವೆ
Posted On:
30 JUN 2021 11:10AM by PIB Bengaluru
ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆಯ ಸಾರ್ವತ್ರಿಕೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಗಡವಾಗಿಯೇ ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ಇತ್ಯಾದಿ ಕ್ರಮಗಳ ಮೂಲಕ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಇದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಯೋಜನೆಯನ್ನು ರೂಪಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲು ಅನುವಾಗಿದೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರಿಕರಣದ ಹೊಸ ಹಂತದಲ್ಲಿ, ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡುತ್ತಿದೆ.
ಭಾರತ ಸರಕಾರವು ಇಲ್ಲಿಯವರೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ, ಭಾರತ ಸರಕಾರದ ಮೂಲಕ (ಉಚಿತವಾಗಿ) ಮತ್ತು ನೇರ ರಾಜ್ಯ ಖರೀದಿ ವರ್ಗದ ಮೂಲಕ 32.13 ಕೋಟಿ (32,13,75,820) ಲಸಿಕೆ ಡೋಸ್‌ಗಳನ್ನು ಒದಗಿಸಿದೆ.
ಇದರಲ್ಲಿ, ವ್ಯರ್ಥವಾದ ಡೋಸ್‌ಗಳೂ ಸೇರಿದಂತೆ ಒಟ್ಟು 31,40,75,654 ಡೋಸ್‌ಗಳನ್ನು ಬಳಸಲಾಗಿದೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ದತ್ತಾಂಶದ ಪ್ರಕಾರ).
73 ಲಕ್ಷಕ್ಕೂ ಹೆಚ್ಚು (73,00,166) ಡೋಸ್‌ಗಳು ಉಳಿಕೆಯಾಗಿದ್ದು, ಬಳಕೆಯಾಗದ ಈ ಕೋವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿವೆ.
ಇದಲ್ಲದೆ, 24,65,980ಕ್ಕೂ ಹೆಚ್ಚು ಲಸಿಕೆ ಡೋಸ್‌ಗಳು ಮಾರ್ಗ ಮಧ್ಯದಲ್ಲಿದ್ದು, ಮುಂದಿನ 3 ದಿನಗಳಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಲಿವೆ.
***
(Release ID: 1731401)
Visitor Counter : 266
Read this release in:
English
,
Urdu
,
Hindi
,
Marathi
,
Bengali
,
Punjabi
,
Gujarati
,
Odia
,
Tamil
,
Telugu
,
Malayalam