ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 01 JUL 2021 9:12AM by PIB Bengaluru

ರಾಷ್ಟ್ರವ್ಯಾಪಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇಲ್ಲಿಯವರೆಗೆ 33.57 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ಭಾರತದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 48,786 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,23,257ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿರುವ ಒಟ್ಟು ಕೊರೊನಾ ಪ್ರಕರಣಗಳ ಪ್ರಮಾಣದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇಕಡ 1.72ರಷ್ಟಿದೆ.

ಇದುವರೆಗೆ ದೇಶಾದ್ಯಂತ 2,94,88,918 ಸೋಂಕಿತರು ಗುಣಮುಖರಾಗಿದ್ದಾರೆ.

61,588 ರೋಗಿಗಳು ದೇಶಾದ್ಯಂತ ಕಳೆದ 24 ತಾಸುಗಳಲ್ಲಿ ಚೇತರಿಸಿಕೊಂಡಿದ್ದಾರೆ.

ಸತತ 49ನೇ ದಿನದಲ್ಲಿ ದೈನಂದಿನ ಚೇತರಿಕೆ ಪ್ರಮಾಣ ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಲ ಪ್ರಕರಣಗಳ ಸಂಖ್ಯೆಯನ್ನು ಹಿಂದಿಕ್ಕುತ್ತಿದೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರವೀಗ 96.97%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ(ಪಾಸಿಟಿವ್ ಪ್ರಕರಣಗಳ ಸಂಖ್ಯೆ) 5% ಮಟ್ಟದಿಂದ ಕೆಳಗಿದ್ದು, ಅದೀಗ 2.64% ಇದೆ.

ದೈನಂದಿನ ಪಾಸಿಟಿವಿಟಿ ದರವೂ ಸತತ 24ನೇ ದಿನದಲ್ಲಿ 5% ಮಟ್ಟದಿಂದ ಕೆಳಗಿದ್ದು, 2.54% ಇದೆ.

ದೇಶಾದ್ಯಂತ ಗಂಟಲು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದ್ದು, ಇದುವರೆಗೆ 41.20 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1731841) Visitor Counter : 244