ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆಯ ಇತ್ತೀಚಿನ ಮಾಹಿತಿ


ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 32.92 ಕೋಟಿಗೂ ಹೆಚ್ಚು ಲಸಿಕೆ ಡೋಸ್ ಒದಗಿಸಿದ ಕೇಂದ್ರ ಸರ್ಕಾರ

1 ಕೋಟಿ 24 ಲಕ್ಷಕ್ಕೂ ಅಧಿಕ ಡೋಸ್ ಅನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯ

Posted On: 01 JUL 2021 2:13PM by PIB Bengaluru

ದೇಶದಾದ್ಯಂತ ಕೋವಿಡ್ -19 ಲಸಿಕೆಯನ್ನು ವಿಸ್ತರಿಸುವ ಮತ್ತು ಅದರ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021 ಜೂನ್ 21ರಿಂದ ಕೋವಿಡ್ -19 ಸಾರ್ವತ್ರಿಕ ಲಸಿಕೀಕರಣ ಹೊಸ ವೇಗ ಪಡೆದುಕೊಂಡಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತಿದ್ದು ಅವು ಉತ್ತಮವಾಗಿ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ.

ದೇಶವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸುತ್ತಿದೆ. ಕೋವಿಡ್ -19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ನೂತನ ಹಂತದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿನ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಯ ಪೈಕಿ ಶೇ.75ರಷ್ಟನ್ನು ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತಿದೆ.

ಈವರೆಗೆ ಕೇಂದ್ರ ಸರ್ಕಾರ ಈವರೆಗೆ ರಾಜ್ಯಗಳಿಗೆ 32.92 ಕೋಟಿ (32,92,01,800) ಲಸಿಕೆ ಡೋಸ್ ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತ ಮಾರ್ಗದಲ್ಲಿ) ಮತ್ತು ರಾಜ್ಯಗಳಿಂದಲೇ ನೇರವಾಗಿ ಖರೀದಿಸುವ ಪ್ರವರ್ಗದ ಮೂಲಕ ಪೂರೈಕೆ ಮಾಡಿದೆ

ಪೈಕಿ ಲಸಿಕೆ ವ್ಯರ್ಥವಾಗಿರುವುದೂ ಸೇರಿದಂತೆ ಒಟ್ಟು ಲಸಿಕೆ ಡೋಸ್ ಬಳಕೆ 31,67,50,891 ಆಗಿದೆ. (ಇಂದು ಬೆಳಗ್ಗೆ 8 ಗಂಟೆಯವರೆಗೆ ಲಭ್ಯವಾದ ಮಾಹಿತಿಯಂತೆ)

1.24 ಕೋಟಿ (1,24,50,909)ಗೂ ಅಧಿಕ ಉಳಿಕೆ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್ ಗಳು ಲಸಿಕೆ ನೀಡಿಕೆಗೆ ರಾಜ್ಯಗಳುಕೇಂದ್ರಾಡಳಿತ ಪ್ರದೇಶದ ಬಳಿ ಲಭ್ಯವಿದೆ.

ಮಿಗಿಲಾಗಿ 94,66,420 ಡೋಸ್ ಲಸಿಕೆ ಸಾಗಣೆಯಲ್ಲಿದ್ದು, ಮುಂದಿನ 3 ದಿನಗಳಲ್ಲಿ ಅವುಗಳನ್ನು ರಾಜ್ಯಗಳು ಪಡೆದುಕೊಳ್ಳಲಿವೆ.

***


(Release ID: 1731886) Visitor Counter : 178