ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 03 JUL 2021 9:19AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 34.46 ಕೋಟಿ ಲಸಿಕೆ ಡೋಸ್ ನೀಡಲಾಗಿದೆ.
ದೇಶದಲ್ಲಿ ಕಳೆದ 24 ತಾಸುಗಳಲ್ಲಿ 44,111 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 4,95,533ಕ್ಕೆ ಇಳಿಕೆ ಕಂಡಿದೆ.
97 ದಿನಗಳ ನಂತರ ಸಕ್ರಿಯ ಪ್ರಕರಣಗಳ ಪ್ರಮಾಣ 5 ಲಕ್ಷ ಮಟ್ಟದಿಂದ ಕೆಳಕ್ಕೆ ಇಳಿದಿದೆ.
ದೇಶದಲ್ಲಿರುವ ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1.62% ಇದೆ.
ದೇಶಾದ್ಯಂತ ಇದುವರೆಗೆ 2,96,05,779 ಮಂದಿ ಕೊರೊನೊ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 57,477 ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಸತತ 51ನೇ ದಿನದಲ್ಲಿ ದೈನಂದಿನ ಚೇತರಿಕೆ ಪ್ರಮಾಣವು ದಿನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಪ್ರಕರಣಗಳನ್ನು ಹಿಂದಿಕ್ಕಿದೆ.
ಇದರೊಂದಿಗೆ ಚೇತರಿಕೆ ದರವೀಗ 97.06%ಗೆ ಸುಧಾರಣೆ ಕಂಡಿದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗಿದ್ದು, ಅದೀಗ 2.50 % ಕಾಯ್ದುಕೊಂಡಿದೆ.
ನಿರಂತರ 26ನೇ ದಿನದಲ್ಲಿ ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದಿಂದ ಕೆಳಗಿದ್ದು, ಅದೀಗ 2.35%ಗೆ ಇಳಿಕೆ ಕಂಡಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದ್ದು, ಇದುವರೆಗೆ 41.64 ಕೊರೊನಾ ಸೋಂಕು ಪತ್ತೆಯ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1732481) Visitor Counter : 206