ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್‌-19 ಲಸಿಕೆ ತಾಜಾ ಮಾಹಿತಿ


ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರಕಾರ 36.97 ಕೋಟಿಗೂ ಅಧಿಕ ಲಸಿಕೆ ಡೋಸ್‌ಗಳನ್ನು ಒದಗಿಸಿದೆ

ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಜನರಿಗೆ ನೀಡಲು ಇನ್ನೂ 2.01 ಕೋಟಿ ಗಿಂತಲೂ ಹೆಚ್ಚು ಡೋಸ್‌ಗಳು ಲಭ್ಯವಿವೆ

ಪ್ರಕಟಣಾ ದಿನಾಂಕ: 05 JUL 2021 10:13AM by PIB Bengaluru

ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021 ಜೂನ್ 21ರಿಂದ ಪ್ರಾರಂಭವಾಗಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಗಡವಾಗಿಯೇ ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ಇತ್ಯಾದಿ ಕ್ರಮಗಳ ಮೂಲಕ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಇದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಯೋಜನೆಯನ್ನು ರೂಪಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲು ಅನುವಾಗಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಕೆ ಮಾಡುತ್ತಿದೆ.

ಭಾರತ ಸರಕಾರವು ಇಲ್ಲಿಯವರೆಗೆ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ, ಎಲ್ಲಾ ಮೂಲಗಳ ಮೂಲಕ 36.97 ಕೋಟಿಗಿಂತಲೂ ಅಧಿಕ  (36,97,70,980) ಲಸಿಕೆ ಡೋಸ್‌ಗಳನ್ನು ಒದಗಿಸಿದೆ.

ಇದರಲ್ಲಿ, ವ್ಯರ್ಥವಾದ ಲಸಿಕೆಗಳೂ ಸೇರಿದಂತೆ ಒಟ್ಟು 34,95,74,408  ಡೋಸ್‌ಗಳು ಬಳಕೆಯಾಗಿವೆ (ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಿರುವ ದತ್ತಾಂಶದ ಪ್ರಕಾರ).

2.01 ಕೋಟಿಗಿಂತಲೂ ಅಧಿಕ (2,01,96,572) ಡೋಸ್‌ಗಳು ಉಳಿಕೆಯಾಗಿದ್ದು, ಬಳಕೆಯಾಗದ ಡೋಸ್‌ಗಳು ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿದೆ.

***


(ಪ್ರಕಟಣೆ ಐ.ಡಿ.: 1732806) ವಿಸಿಟರ್ ಕೌಂಟರ್ : 303
ಪ್ರಕಟಣೆಯನ್ನು ಇದರಲ್ಲಿ ಓದಿ: Malayalam , English , Urdu , हिन्दी , Marathi , Bengali , Punjabi , Gujarati , Odia , Tamil , Telugu