ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕಳೆದ 24 ಗಂಟೆಗಳಲ್ಲಿ 40,000 ಕ್ಕಿಂತ ಕಡಿಮೆ ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ
ಭಾರತದ ಸಕ್ರಿಯ ಪ್ರಕರಣಗಳ ಹೊರೆ ಮತ್ತಷ್ಟು ಕುಸಿದು 4,82,071ಕ್ಕೆ ತಲುಪಿದ್ದು, ಒಟ್ಟು ಪ್ರಕರಣಗಳಲ್ಲಿ 1.58% ರಷ್ಟಿದೆ
ಭಾರತದ ಕೋವಿಡ್-19 ಲಸಿಕೆ ವ್ಯಾಪ್ತಿ 35.28 ಕೋಟಿ ದಾಟಿದೆ
ದೈನಂದಿನ ಪಾಸಿಟಿವಿಟಿ ದರ (2.61%) ಸತತ 28 ದಿನಗಳಿಂದ 5% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ
Posted On:
05 JUL 2021 11:53AM by PIB Bengaluru
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 40,000ಕ್ಕಿಂತ ಕಡಿಮೆ (39,796) ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ.
ಸತತ ಎಂಟು ದಿನಗಳಿಂದ 50,000ಕ್ಕಿಂತ ಕಡಿಮೆ ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ. ಇದು ಕೇಂದ್ರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರಂತರ ಮತ್ತು ಸಹಯೋಗದ ಪ್ರಯತ್ನಗಳ ಫಲವಾಗಿದೆ.
ಸಕ್ರಿಯ ಪ್ರರಕಣಗಳಲ್ಲಿ ನಿರಂತರ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ. ದೇಶದ ಸಕ್ರಿಯ ಪ್ರಕರಣಗಳ ಹೊರೆ ಇಂದು 4,82,071 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ನಿವ್ವಳ 3,279 ಕುಸಿತ ಕಂಡುಬಂದಿದ್ದು, ಸಕ್ರಿಯ ಪ್ರಕರಣಗಳು ಈಗ ದೇಶದ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಕೇವಲ 1.58% ಮಾತ್ರ.
ಭಾರತದ ಸಮಗ್ರ ಲಸಿಕೆ ವ್ಯಾಪ್ತಿ ನಿನ್ನೆ 35.28 ಕೋಟಿ ಮೀರಿದೆ. ಇಂದು ಬೆಳಿಗ್ಗೆ 7 ಗಂಟೆಯವರೆಗಿನ ವರದಿಯ ಪ್ರಕಾರ, 46,34,986 ಸೆಷನ್‌ಗಳ ಮೂಲಕ ಒಟ್ಟು 35,28,92,046 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 14,81,583 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದರಲ್ಲಿ ಇವು ಸೇರಿವೆ:
ಆರೋಗ್ಯ ಕಾರ್ಯಕರ್ತರು
|
1ನೇ ಡೋಸ್
|
1,02,29,388
|
2ನೇ ಡೋಸ್
|
73,13,234
|
ಮುಂಚೂಣಿ ಕಾರ್ಯಕರ್ತರು
|
1ನೇ ಡೋಸ್
|
1,75,86,200
|
2ನೇ ಡೋಸ್
|
96,69,322
|
18-44 ವರ್ಷ ವಯೋಮಾನದವರು
|
1ನೇ ಡೋಸ್
|
10,07,24,211
|
2ನೇ ಡೋಸ್
|
27,77,265
|
45-59 ವರ್ಷ ವಯೋಮಾನದವರು
|
1ನೇ ಡೋಸ್
|
9,07,90,116
|
2ನೇ ಡೋಸ್
|
1,89,54,073
|
60 ವರ್ಷ ವಯಸ್ಸು ಮೀರಿದವರು
|
1ನೇ ಡೋಸ್
|
6,89,93,767
|
2ನೇ ಡೋಸ್
|
2,58,54,470
|
ಒಟ್ಟು
|
35,28,92,046
|
ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.
ಕೋವಿಡ್-19 ಸೋಂಕಿನಿಂದ ಹೆಚ್ಚಿನ ಜನರು ಚೇತರಿಸಿಕೊಳ್ಳುತ್ತಿರುವುದರಿಂದ, ಭಾರತದ ದೈನಂದಿನ ಚೇತರಿಕೆಗಳು ಈಗ ಸತತ 53 ದಿನಗಳಿಂದ ದೈನಂದಿನ ಹೊಸ ಪ್ರಕರಣಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿವೆ. ಕಳೆದ 24 ಗಂಟೆಗಳಲ್ಲಿ 42,352 ಚೇತರಿಕೆಗಳು ದಾಖಲಾಗಿವೆ.
ದೈನಂದಿನ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ 2,000ಕ್ಕೂ ಹೆಚ್ಚು (2,556) ಚೇತರಿಕೆಗಳು ವರದಿಯಾಗಿವೆ.
ಸಾಂಕ್ರಾಮಿಕದ ಆರಂಭದಿಂದ ಸೋಂಕಿಗೆ ಒಳಗಾದವರಲ್ಲಿ ಈಗಾಗಲೇ 2,97,00,430 ಜನರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 42,352 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದು ಒಟ್ಟಾರೆ 97.11% ಚೇತರಿಕೆ ದರವನ್ನು ಸೂಚಿಸುತ್ತದೆ. ಈ ಚೇತರಿಕೆ ದರದಲ್ಲಿ ನಿರಂತರ ಹೆಚ್ಚಳ ಪ್ರವೃತ್ತಿ ಕಂಡುಬಂದಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿರುವುದರಿಂದ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 15,22,504 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ 41.97 ಕೋಟಿಗಿಂತಲೂ ಅಧಿಕ (41,97,77,457) ಪರೀಕ್ಷೆಗಳನ್ನು ನಡೆಸಲಾಗಿದೆ.
ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದರೂ, ಸಾಪ್ತಾಹಿಕ ಪಾಸಿಟಿವಿಟಿ ದರದಲ್ಲಿ ನಿರಂತರ ಕುಸಿತ ದಾಖಲಾಗುತ್ತಿದೆ. ಸಾಪ್ತಾಹಿಕ ಪಾಸಿಟಿವಿಟಿ ದರವು ಪ್ರಸ್ತುತ 2.40% ರಷ್ಟಿದ್ದರೆ, ದೈನಂದಿನ ಪಾಸಿಟಿವಿಟಿ ದರವು ಇಂದು 2.61% ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು ಸತತ 28 ದಿನಗಳಿಂದ 5% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ.
***
(Release ID: 1733002)
Visitor Counter : 254
Read this release in:
English
,
Urdu
,
Marathi
,
Hindi
,
Bengali
,
Punjabi
,
Gujarati
,
Odia
,
Tamil
,
Telugu
,
Malayalam