ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 06 JUL 2021 8:53AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ನೀಡಿಕೆ ಅಭಿಯಾನದಲ್ಲಿ ಇದುವರೆಗೆ 35.75 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕಳೆದ 24 ತಾಸುಗಳಲ್ಲಿ 34,703 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ 111 ದಿನಗಳಲ್ಲಿ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ4,64,357ಕ್ಕೆ ಇಳಿಕೆಯಾಗಿದೆ. ಕಳೆದ 101 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ.

ದೇಶದಲ್ಲಿರುವ ಒಟ್ಟು ಕೊರೊನಾ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ 1.52%ರಷ್ಟು ಇದೆ.

ದೇಶಾದ್ಯಂತ ಇದುವರೆಗೆ 2,97,52,294 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲೇ ದೇಶಾದ್ಯಂತ 51,864 ಜನರು ಚೇತರಿಸಿಕೊಂಡಿದ್ದಾರೆ.

ದೈನಂದಿನ ಚೇತರಿಕೆ ಪ್ರಮಾಣವು ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಪ್ರಕರಣಗಳ ಸಂಖ್ಯೆಯನ್ನು ಹಿಂದಿಕ್ಕುತ್ತಿದೆ. ಸತತ 54ನೇ ದಿನದಲ್ಲಿ ಇದು ಮುಂದುವರಿದಿದೆ.

ಇದರೊಂದಿಗೆ ಚೇತರಿಕೆ ದರ ಇದೀಗ 97.17%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಅದೀಗ 2.40% ಇದೆ.

ದೈನಂದಿನ ಪಾಸಿಟಿವಿಟಿ ದರ ಸತತ 15 ದಿನಗಳಿಂದಲೂ 3% ಮಟ್ಟದಿಂದ ಕಳೆಗಿಳಿದಿದ್ದು, ಅದೀಗ 2.11%ನಲ್ಲಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 42.14 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1733059) Visitor Counter : 285