ಪ್ರಧಾನ ಮಂತ್ರಿಯವರ ಕಛೇರಿ
ಮೇರು ನಟ ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
07 JUL 2021 9:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇರು ನಟ ದಿಲೀಪ್ ಕುಮಾರ್ ಜೀ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಸಾಂಸ್ಕೃತಿಕ ಜಗತ್ತಿಗೆ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ದಿಲೀಪ್ ಕುಮಾರ್ ಅವರನ್ನು ಸಿನಿಮಾದ ದಂತಕತೆ ಎಂದು ಸ್ಮರಿಸಲಾಗುತ್ತದೆ. ಅವರು ಎಣೆಯಿಲ್ಲದ ಚುರುಕುತನದಿಂದ ಹರಸಲ್ಪಟ್ಟಿದ್ದರು, ಈ ಕಾರಣದಿಂದಾಗಿಯೇ ತಲೆಮಾರುಗಳ ಪ್ರೇಕ್ಷಕರು ಸಮ್ಮೋಹನಗೊಂಡಿದ್ದರು. ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಆತ್ಮಕ್ಕೆ ಶಾಂತಿ ಸಿಗಲಿ" ಎಂದು ತಿಳಿಸಿದ್ದಾರೆ.
***
(रिलीज़ आईडी: 1733265)
आगंतुक पटल : 239
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam