ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್ -19 ತಾಜಾ ಸುದ್ದಿ

Posted On: 07 JUL 2021 9:08AM by PIB Bengaluru

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 36.13 ಕೋಟಿ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 43,733 ಹೊಸ ಪ್ರಕರಣಗಳು ದಾಖಲಾಗಿವೆ.

ಭಾರತದ ಒಟ್ಟು ಸಕ್ರಿಯ ಪ್ರಕರಣಗಳು 4,59,920ಕ್ಕೆ ಇಳಿಕೆಯಾಗಿದೆ.

ಒಟ್ಟು ಪ್ರಕರಣಗಳ ಪೈಕಿ ಶೇ.1.5ರಷ್ಟು ಸಕ್ರಿಯ ಪ್ರಕರಣಗಳಿವೆ.

ಈವರೆಗೆ ದೇಶಾದ್ಯಂತ ಒಟ್ಟು 2,97,99,534 ಜನರು ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 47,240 ರೋಗಿಗಳು ಗುಣಮುಖರಾಗಿದ್ದಾರೆ.

ಸತತ 55ನೇ ದಿನವೂ ದೈನಿಕ ಹೊಸ ಪ್ರಕರಣಗಳಿಗಿಂತಲೂ ದೈನಿಕ ಚೇತರಿಕೆಯೇ ಹೆಚ್ಚಾಗಿದೆ.

ಚೇತರಿಕೆಯ ದರ ಶೇ. 97.18ಕ್ಕೆ ಹೆಚ್ಚಾಗಿದೆ.

ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗಿದ್ದು, ಪ್ರಸ್ತುತ ಶೇ. 2.39ರಲ್ಲಿದೆ.

ದೈನಿಕ ಪಾಸಿಟಿವಿಟಿ ದರ ಶೇ.2.29 ಆಗಿದ್ದು, ಸತತ 16ನೇ ದಿನವೂ ಶೇ.3ಕ್ಕಿಂತ ಕಡಿಮೆ ಇದೆ.

ಪರೀಕ್ಷೆಯ ಸಾಮರ್ಥ್ಯ ಗಣನೀಯವಾಗಿ ಹೆಚ್ಚಳವಾಗಿದ್ದು ಈವರೆಗೆ ಒಟ್ಟು42.33 ಕೋಟಿ ಪರೀಕ್ಷೆ ನಡೆಸಲಾಗಿದೆ.

***


(Release ID: 1733303) Visitor Counter : 288