ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ನೀಡಿಕೆಯ ಪರಿಷ್ಕೃತ ವರದಿ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 37.43 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ನೀಡಿಕೆ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಲಭ್ಯವಿದೆ 1.67 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ
Posted On:
07 JUL 2021 10:46AM by PIB Bengaluru
ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕಾ ಅಭಿಯಾನದ ವ್ಯಾಪ್ತಿ ವಿಸ್ತರಣೆ ಮತ್ತು ಆಂದೋಲನದ ಗತಿಗೆ ವೇಗ ನೀಡಲು ಬದ್ಧವಾಗಿದೆ. ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ ಜೂನ್ 21ರಿಂದ ಆರಂಭವಾಗಿದೆ. ಅಧಿಕ ಪ್ರಮಾಣದ ಲಸಿಕೆ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆ ನೀಡಿಕೆ ಕಾರ್ಯಕ್ರಮಗಳನ್ನು ಯೋಜಿತ ರೀತಿಯಲ್ಲಿ ನಡೆಸಲು ಅನುವಾಗುವಂತೆ ಲಸಿಕೆ ಲಭ್ಯತೆ ಬಗ್ಗೆ ಮೊದಲೇ ತಿಳಿಯುವಂತೆ ಮಾಡುವುದು ಹಾಗು ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರ ಲಸಿಕಾ ಅಭಿಯಾನವನ್ನು ದೇಶವ್ಯಾಪಿ ಹೆಚ್ಚಿಸುತ್ತಿದೆ.
ದೇಶವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಕೇಂದ್ರ ಸರ್ಕಾರವು ಉಚಿತವಾಗಿ ಲಸಿಕೆ ನೀಡುವ ಮೂಲಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ. ಕೋವಿಡ್-19 ಲಸಿಕೆ ಆಂದೋಲನದ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶೀಯ ಲಸಿಕಾ ತಯಾರಿಕಾ ಕಂಪನಿಗಳು ತಯಾರಿಸುತ್ತಿರುವ ಲಸಿಕೆಯ ಶೇಕಡ 75ರಷ್ಟು ಭಾಗವನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ವಿತರಿಸುತ್ತಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಎಲ್ಲಾ ಮೂಲಗಳಿಂದ 37.43 ಕೋಟಿಗಿಂತ ಹೆಚ್ಚಿನ ಅಂದರೆ 37,43,25,560 ಡೋಸ್ ಲಸಿಕೆಯನ್ನು ಒದಗಿಸಲಾಗಿದೆ. ಜತೆಗೆ, 48,65,110 ಡೋಸ್ ಲಸಿಕೆ ಸದ್ಯದಲ್ಲೇ ವಿತರಣೆ ಆಗಲಿದೆ.
ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶಗಳ ಪ್ರಕಾರ, 37,43,25,560 ಡೋಸ್ ಲಸಿಕೆ ಪೈಕಿ ವ್ಯರ್ಥವಾದುವು ಸೇರಿದಂತೆ ಒಟ್ಟು 35,75,98,947 ಡೋಸ್ ಲಸಿಕೆ ಬಳಕೆಯಾಗಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 1.67 ಕೋಟಿಗಿಂತ ಹೆಚ್ಚಿನ ಅಂದರೆ 1,67,26,613 ಡೋಸ್ ಕೋವಿಡ್-19 ಲಸಿಕೆ ಲಭ್ಯವಿದೆ.
***
(Release ID: 1733306)
Visitor Counter : 331