ಪ್ರಧಾನ ಮಂತ್ರಿಯವರ ಕಛೇರಿ

ಮಂತ್ರಿ ಮಂಡಲ ಸೇರಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 07 JUL 2021 8:52PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ಸಚಿವರ ಅಧಿಕಾರಾವಧಿಗೆ ಶುಭ ಹಾರೈಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಇಂದು ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಅವರ ಅಧಿಕಾರಾವಧಿಗೆ ಶುಭ ಹಾರೈಸುತ್ತೇನೆ. ನಾವು ಜನರ ಆಶೋತ್ತರಗಳನ್ನು ಈಡೇರಿಸಲು ಕಾರ್ಯ ಮುಂದುವರಿಸುತ್ತೇವೆ ಮತ್ತು ಬಲಿಷ್ಠ ಮತ್ತು ಸಮೃದ್ಧ ಭಾರತ ನಿರ್ಮಾಣ ಮಾಡುತ್ತೇವೆ. #Govt4Growth" ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1733527) ವಿಸಿಟರ್ ಕೌಂಟರ್ : 223