ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ
ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಶ್ರೀ ಅನುರಾಗ್ ಠಾಕೂರ್
Posted On:
08 JUL 2021 6:19PM by PIB Bengaluru
ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾಗಿ ಶ್ರೀ ಅನುರಾಗ್ ಠಾಕೂರ್ ನವದೆಹಲಿಯಲ್ಲಿಂದು ಅಧಿಕಾರ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ತಮಗೆ ನೀಡಿರುವ ಎಲ್ಲಾ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು. ಹಿಂದಿನ ಸಚಿವ ಶ್ರೀ ಕಿರೆನ್ ರಿಜಿಜು ಅವರು ಮಾಡಿರುವ ಉತ್ತಮ ಕೆಲಸಗಳನ್ನು ಮುಂದುವರೆಸಲಾಗುವುದು ಮತ್ತು ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೃಷ್ಟಿಯಂತೆ ಕ್ರೀಡಾ ಕ್ಷೇತ್ರ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮೂಹದ ಕೊಡುಗೆ ಹೆಚ್ಚಿಸಲು ತಾವು ಪ್ರಯತ್ನಿಸುವುದಾಗಿ ಹೇಳಿದರು.
ಕ್ರೀಡಾ ಇಲಾಖೆಯ ಕಾರ್ಯದರ್ಶಿ ಶ್ರೀ ರವಿ ಮಿತ್ತಲ್ ಹಾಗೂ ಯುವ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ‍್ರೀಮತಿ ಉಷಾ ಶರ್ಮಾ ಅವರು ಸಚಿವರನ್ನು ಕಚೇರಿಗೆ ಸ್ವಾಗತಿಸಿದರು.
ಹಿಮಾಚಲ ಪ್ರದೇಶದ ಹಮೀರ್ಪುರ್ ಕ್ಷೇತ್ರದಿಂದ [ಲೋಕಸಭೆ] ಶ್ರೀ ಅನುರಾಗ್ ಠಾಕೂರ್ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. 2019, ಮೇ 31 ರಿಂದ 2021 ರ ಜುಲೈ 7 ರ ವರೆಗೆ ಸಚಿವರು ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಖಾತೆ ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದರು. ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮತ್ತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. 16 ನೇ ಲೋಕಸಭೆಯಲ್ಲಿ ಅವರು ಅತ್ಯಂತ ಕಿರಿಯ ವಯಸ್ಸಿನ ಮುಖ್ಯ ಸಚೇತಕರಾಗಿಯೂ ಕಾರ್ಯನಿರ್ವಹಿಸಿದ್ದರು.
***
(Release ID: 1733987)
Visitor Counter : 213