ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ನೀಡಿಕೆಯ ಇಂದಿನ ಪರಿಷ್ಕೃತ ವರದಿ


ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 38.18 ಕೋಟಿ ಡೋಸ್|ಗಿಂತ ಹೆಚ್ಚಿನ ಲಸಿಕೆ ನೀಡಿಕೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 1.70 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ಲಭ್ಯ

Posted On: 09 JUL 2021 10:11AM by PIB Bengaluru

ದೇಶಾದ್ಯಂತ ಕೋವಿಡ್-19 ಲಸಿಕೆ ನೀಡಿಕೆಯ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಆಂದೋಲನದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ದವಾಗಿದೆ.ಕೋವಿಡ್-19 ಆಂದೋಲನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಂದೋಲನವನ್ನು ಸಮರ್ಪಕವಾಗಿ ರೂಪಿಸಲು ಅನುವಾಗುವಂತೆ ಮುಂಗಡವಾಗಿ ಲಸಿಕೆ ಲಭ್ಯತೆಯ ಖಾತ್ರಿ ಹಾಗೂ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಲಸಿಕೆ ಅಭಿಯಾನವನ್ನು ದೇಶಾದ್ಯಂತ ಹೆಚ್ಚಿಸಲಾಗಿದೆ.

ದೇಶವ್ಯಾಪಿ ನಡೆಯುತ್ತಿರುವ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ವಿತರಿಸುತ್ತಿದೆ. ಆಂದೋಲನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶೀಯ ಲಸಿಕಾ ಉತ್ಪಾದಕ ಕಂಪನಿಗಳಿಂದ  75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡುತ್ತಿದೆ.

38.18 ಕೋಟಿಗಿಂತ ಹೆಚ್ಚಿನ ಅಂದರೆ 38,18,97,610 ಡೋಸ್ ಲಸಿಕೆಯನ್ನು ಎಲ್ಲಾ ಮೂಲಗಳಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ವಿತರಿಸಿದೆ. ಇನ್ನೂ ಹೆಚ್ಚಿನ 23,80,080 ಡೋಸ್ ಲಸಿಕೆ ಅತಿ ಶೀಘ್ರವೇ ಹಂಚಿಕೆ ಆಗಲಿದೆ.

ಈಗಾಗಲೇ ವಿತರಿಸಿರುವ 38.18 ಕೋಟಿ ಲಸಿಕೆ ಡೋಸ್ ಪೈಕಿ ಸವಕಳಿ ಸೇರಿದಂತೆ ಒಟ್ಟು 36,48,77,756 ಡೋಸ್ ಲಸಿಕೆ ಬಳಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶ(ದತ್ತಾಂಶ)ದಿಂದ ಇದು ತಿಳಿದುಬಂದಿದೆ.

ರಾಜ್ಯಗಳು ಮತ್ತು ಕೇಂದರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.70 ಕೋಟಿಗಿಂತ ಹೆಚ್ಚಿನ ಅಂದರೆ 1,70,19,854 ಡೋಸ್ ಬಳಕೆಯಾಗದೆ ಉಳಿದಿರುವ ಲಸಿಕೆ ಬಳಕೆಗೆ ಲಭ್ಯವಿದೆ.

***



(Release ID: 1734166) Visitor Counter : 212