ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ವರದಿ

Posted On: 10 JUL 2021 8:56AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 37.21 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಖಳೆದ 24 ತಾಸುಗಳಲ್ಲಿ 42,766 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,55,033ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1.48% ಇದೆ.

ದೇಶಾದ್ಯಂತ ಇದುವರೆಗೆ ಕೊರೊನಾ ಸೋಂಕಿನಿಂದ 2,99,33,538 ಜನರು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 45,254 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರ ಇದೀಗ 97.20%ಗೆ ಸುಧಾರಣೆ ಕಂಡಿದೆ.

ವಾರದ ಪಾಸಿಟಿವಿಟಿ (ಸೋಂಕಿತರ ಸಂಖ್ಯೆ) ನಿರಂತರ 5 % ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದ್ದು, ಅದೀಗ 2.34%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರ ಸತತ 19ನೇ ದಿನದಲ್ಲಿ 3% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದ್ದು, ಅದೀಗ 2.19%ಗೆ ತಗ್ಗಿದೆ.

ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ದೇಶಾದ್ಯಂತ 42.90 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1734379) Visitor Counter : 202