ಪ್ರಧಾನ ಮಂತ್ರಿಯವರ ಕಛೇರಿ

ಕಾಶಿ ಅನ್ನಪೂರ್ಣ ದೇವಾಲಯದ ಮಹಂತ ಶ್ರೀ ರಾಮೇಶ್ವರ್ ಪುರಿ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 10 JUL 2021 6:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶಿ ಅನ್ನಪೂರ್ಣ ದೇವಾಲಯದ ಮಹಂತ ಶ್ರೀ ರಾಮೇಶ್ವರ್ ಪುರಿ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಕಾಶಿ ಅನ್ನಪೂರ್ಣ ದೇವಾಲಯದ ಮಹಂತ ಶ್ರೀ ರಾಮೇಶ್ವರ್ ಪುರಿ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಧರ್ಮ ಮತ್ತು ಆಧ್ಯಾತ್ಮಿಕತೆಯನ್ನು ಸಾಮಾಜಿಕ ಸೇವೆಯೊಂದಿಗೆ ಬೆಸೆಯುವ ಮೂಲಕ ಸಾಮಾಜಿಕ ಕಾರ್ಯಗಳಿಗಾಗಿ ನಿರಂತರವಾಗಿ ಜನರನ್ನು ಪ್ರೇರೇಪಿಸುತ್ತಿದ್ದರು. ಓಂ ಶಾಂತಿ’’ ಎಂದು ಹೇಳಿದ್ದಾರೆ

***


(रिलीज़ आईडी: 1734614) आगंतुक पटल : 189
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam