ಭೂವಿಜ್ಞಾನ ಸಚಿವಾಲಯ

ದೇಶದ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯ ಸಾಧ್ಯತೆ

Posted On: 11 JUL 2021 4:27PM by PIB Bengaluru

ಕೊಂಕಣ ಮತ್ತು ಗೋವಾದ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆಯ (ಐಎಂಡಿ) ತಿಳಿಸಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಗುಜರಾತ್, ಮಧ್ಯ ಮಹಾರಾಷ್ಟ್ರ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಮ್, ತೆಲಂಗಾಣ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ ಮತ್ತು ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್  ನಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಬಿಹಾರ, ಪಶ್ಚಿಮ ಬಂಗಾಳದ ಹಿಮಾಲಯ ಪ್ರದೇಶ ಮತ್ತು ಸಿಕ್ಕಿಂ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಸೌರಾಷ್ಟ್ರ ಮತ್ತು ಕಚ್, ಮರಾಠವಾಡ, ರಾಯಲಸೀಮೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ತೆಲಂಗಾಣದ ಹಲವೆಡೆ ಗುಡುಗು ಮತ್ತು ಗಾಳಿ (ಗಂಟೆಗೆ 30-40 ಕಿ.ಮೀ) ಸಹಿತ ಮಳೆಯಾಗಲಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ & ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ವಿದರ್ಭ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂದ್ರಪ್ರದೇಶದ ಕರಾವಳಿಮತ್ತು ಯಾನಮ್  , ರಾಯಲಸೀಮೆ, ಮತ್ತು ತಮಿಳುನಾಡು, ಪುದುಚೇರಿ, ಮತ್ತು ಕಾರೈಕಲ್ ನಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ.

ಪಶ್ಚಿಮ ರಾಜಸ್ಥಾನದ ಹಲವು ಸ್ಥಳಗಳಲ್ಲಿ ಬಿಸಿಗಾಳಿಯ ಅಲೆಗಳು ಬೀಸಲಿವೆ. ಪಶ್ಚಿಮ ಮಧ್ಯ ಮತ್ತು ನೈರುತ್ಯ ಅರಬ್ಬಿ ಸಮುದ್ರ, ಆಗ್ನೇಯ, ಪೂರ್ವ ಮಧ್ಯ ಮತ್ತು ಈಶಾನ್ಯ ಅರಬ್ಬಿ ಸಮುದ್ರ ಮತ್ತು ಗುಜರಾತ್-ಮಹಾರಾಷ್ಟ್ರ-ಗೋವಾ-ಕರ್ನಾಟಕ-ಕೇರಳ ಕರಾವಳಿ ತೀರಗಳಲ್ಲಿ; ಲಕ್ಷದ್ವೀಪ ಪ್ರದೇಶ, ಪಶ್ಚಿಮ ಮಧ್ಯ ಮತ್ತು ದಕ್ಷಿಣ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ; ಮನ್ನಾರ್ ಮತ್ತು ಅಂಡಮಾನ್ ಸಮುದ್ರದ ಕೊಲ್ಲಿಭಾರೀ ಗಾಳಿ, ಮಳೆ (ಗಂಟೆಗೆ 45-55 ಕಿ.ಮೀ ನಿಂದ 65 ಕಿ.ಮೀ ವೇಗದಲ್ಲಿ) ಇರುವ ಸಾಧ್ಯತೆಯಿದೆ ಎಂದು ಇಲಾಖೆಯ ಬುಲೆಟಿನ್ ತಿಳಿಸಿದೆ. ಮೀನುಗಾರರು ಪ್ರದೇಶಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

***



(Release ID: 1734677) Visitor Counter : 147