ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ತಾಜಾ ವರದಿ


38.60 ಕೋಟಿಗೂ ಹೆಚ್ಚು ಲಸಿಕಾ ಡೋಸ್ ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಕ್ಕೆ ಪೂರೈಸಲಾಗಿದೆ

1.44 ಕೋಟಿ ಬಳಕೆಯಾಗದ ಮತ್ತು ಬಾಕಿ ಡೋಸ್ ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಸಿಕೆ ನೀಡಿಕೆಗೆ ಲಭ್ಯ ಇವೆ

Posted On: 11 JUL 2021 10:25AM by PIB Bengaluru

ದೇಶದಾದ್ಯಂತ ಕೋವಿಡ್ -19 ಲಸಿಕೆಯನ್ನು ವಿಸ್ತರಿಸುವ ಮತ್ತು ಅದರ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021 ಜೂನ್ 21ರಿಂದ ಕೋವಿಡ್ -19 ಸಾರ್ವತ್ರಿಕ ಲಸಿಕೀಕರಣ ಹೊಸ ವೇಗ ಪಡೆದುಕೊಂಡಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತಿದ್ದು ಅವು ಉತ್ತಮವಾಗಿ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ.

ದೇಶವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸುತ್ತಿದೆ. ಕೋವಿಡ್ -19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ನೂತನ ಹಂತದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿನ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಯ ಪೈಕಿ ಶೇ.75ರಷ್ಟನ್ನು ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತಿದೆ.

ಈವರೆಗೆ ಕೇಂದ್ರ ಸರ್ಕಾರ ಈವರೆಗೆ ರಾಜ್ಯಗಳಿಗೆ 38.60 ಕೋಟಿ (38,60,51,110) ಲಸಿಕೆ ಡೋಸ್ ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಮೂಲಗಳ ಮೂಲಕ ಪೂರೈಕೆ ಮಾಡಲಾಗಿದೆ ಮತ್ತು 11,25,140 ಡೋಸ್ ಲಸಿಕೆ ಸಾಗಣೆಯ ಹಂತದಲ್ಲಿವೆ

ಪೈಕಿ ಲಸಿಕೆ ವ್ಯರ್ಥವಾಗಿರುವುದೂ ಸೇರಿದಂತೆ ಒಟ್ಟು ಲಸಿಕೆ ಡೋಸ್ ಬಳಕೆ 37,16,47,625  ಆಗಿದೆ. (ಇಂದು ಬೆಳಗ್ಗೆ 8 ಗಂಟೆಯವರೆಗೆ ಲಭ್ಯವಾದ ಮಾಹಿತಿಯಂತೆ).

1.44 ಕೋಟಿ (1,44,03,485)ಗೂ ಅಧಿಕ ಉಳಿಕೆ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್ ಗಳು ಲಸಿಕೆ ನೀಡಿಕೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶ ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿದೆ.

***


(Release ID: 1734678) Visitor Counter : 202