ಪ್ರಧಾನ ಮಂತ್ರಿಯವರ ಕಛೇರಿ

ಜನರ ಪದ್ಮ ಪ್ರಶಸ್ತಿಗೆ ಸ್ಫೂರ್ತಿದಾಯಕ ಜನರನ್ನು ನಾಮನಿರ್ದೇಶನ ಮಾಡುವಂತೆ ಸಾರ್ವಜನಿಕರಿಗೆ ಕೋರಿದ ಪ್ರಧಾನಮಂತ್ರಿ

Posted On: 11 JUL 2021 11:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮ ಪ್ರಶಸ್ತಿಗೆ ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡಿದ ಮತ್ತು ಹೆಚ್ಚು ಪ್ರಚಾರಕ್ಕೆ ಬಾರದ ಜನರನ್ನು ನಾಮನಿರ್ದೇಶನ ಮಾಡುವಂತೆ ಕೋರಿದ್ದಾರೆ. ಸೆಪ್ಟೆಂಬರ್ 15ರವರೆಗೆ ಈ ನಾಮನಿರ್ದೇಶನ ತೆರೆದಿರುತ್ತದೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಭಾರತದಲ್ಲಿ ಹಲವು ಪ್ರತಿಭಾವಂತ ಜನರಿದ್ದಾರೆ, ಅವರು ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡುತ್ತಿದ್ದಾರೆ. ಹಲವು ಬಾರಿ ನಾವು ಅವರ ಬಗ್ಗೆ ನೋಡುವುದಿಲ್ಲ ಅಥವಾ ಕೇಳುವುದಿಲ್ಲ. ನಿಮಗೆ ಹೆಚ್ಚು ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ತಿಳಿದಿದೆಯೇ? ನೀವು ಅವರನ್ನು #PeoplesPadma ನಾಮನಿರ್ದೇಶನ ಮಾಡಬಹುದು. ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ."

***


(Release ID: 1734680) Visitor Counter : 176