ಪ್ರಧಾನ ಮಂತ್ರಿಯವರ ಕಛೇರಿ

ಜಗನ್ನಾಥ ರಥಯಾತ್ರೆ; ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

ಪ್ರಕಟಣಾ ದಿನಾಂಕ: 12 JUL 2021 9:47AM by PIB Bengaluru

ಒಡಿಶಾದ ಪುರಿಯಲ್ಲಿಂದು ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಜಗನ್ನಾಥ ರಥಯಾತ್ರೆಯ ವಿಶೇಷ ಸಂದರ್ಭದಲ್ಲಿ ದೇಶದ ಸಮಸ್ತ ಜನತೆಗೆ ಶುಭಕಾಮನೆಗಳು. ಭಗವಂತ ಜಗನ್ನಾಥನಿಗೆ ನಾವೆಲ್ಲಾ ತಲೆಬಾಗಿ ನಮಿಸೋಣ. ದೇಶದ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಜಗನ್ನಾಥನು ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಕರುಣಿಸಲಿ” ಎಂದು ಪ್ರಾರ್ಥಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1734719) ವಿಸಿಟರ್ ಕೌಂಟರ್ : 282